fbpx
ಸಮಾಚಾರ

ರಾಜ್ಯಪಾಲ ವಜುಭಾಯಿ ವಾಲಾ ಆಸ್ಪತ್ರೆಗೆ ದಾಖಲು

ಅನಾರೋಗ್ಯದಿಂದ ಬಳಲುತ್ತಿರುವ ರಾಜ್ಯ ರಾಜ್ಯಪಾಲರಾದ ವಜುಬಾಯಿ ವಾಲಾ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲರ ಆರೋಗ್ಯ ವಿಚಾರಿಸಿದ್ದಾರೆ.

 

 

ನವೆಂಬರ್​ ಮೊದಲ ವಾರದಲ್ಲಿ ಅವರು ಆಂಜಿಯೋಗ್ರಾಂ ಪರೀಕ್ಷೆಗೆ ಒಳಪಟ್ಟಿದ್ದರು. ಅಂದಿನಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ವೈದ್ಯರು ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವಜುಬಾಯಿ ವಾಲಾ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಗುಜರಾತ್ ಮೂಲದ ವಜುಭಾಯಿ ವಾಲಾ 2014ರಿಂದ ಕರ್ನಾಟಕದ ರಾಜ್ಯಪಾಲರಾಗಿದ್ದಾರೆ. ಗುಜರಾತ್ ವಿಧಾನಸಭೆ ಸ್ಪೀಕರ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. 2014ರ ಸೆಪ್ಟೆಂಬರ್ 1ರಂದು ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಅವರ ಅವಧಿ ಮಾರ್ಚ್‌ಗೆ ಮುಕ್ತಾಯಗೊಂಡಿದೆ. ಇನ್ನೂ ಹೊಸ ರಾಜ್ಯಪಾಲರನ್ನು ನೇಮಕ ಮಾಡಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top