fbpx
ಸಮಾಚಾರ

“ಗೋಡ್ಸೆ ನಿಜವಾದ ದೇಶಭಕ್ತ” ಹೇಳಿಕೆ: ರಕ್ಷಣಾ ಸಮಿತಿಯಿಂದ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​ಗೆ ಗೇಟ್ ಪಾಸ್

ನಾಥೂರಾಮ್ ಗೋಡ್ಸೆ ದೇಶ ಭಕ್ತ ಎಂದು ಹೇಳಿದ ಬೆನ್ನಲ್ಲೇ ಭೋಪಾಲ್ ಸಂಸದೆ ಸಾಧ್ವಿಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಿಂದ ಕೈ ಬಿಡಲಾಗಿದೆ.

 

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯಿಂದ ಪ್ರಗ್ಯಾ ಸಿಂಗ್​ ಠಾಕೂರ್​ ಅವರನ್ನು ಕೈಬಿಡಲು ಪಕ್ಷವು ನಿರ್ಧರಿಸಿದೆ. ಇದರೊಂದಿಗೆ ಅಧಿವೇಶನ ಮುಗಿಯೋವರೆಗೂ ವೇಳೆ ನಡೆಯುವ ಸಂಸದೀಯ ಪಕ್ಷದ ಸಭೆಗಳಲ್ಲಿಯು ಠಾಕೂರ್​ ಭಾಗವಹಿಸುವಂತಿಲ್ಲ ಎಂದು ಹೇಳಿದ್ದಾರೆ.

ಬುಧವಾರವಷ್ಟೇ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಗೋಡ್ಸೆ ದೇಶ ಭಕ್ತ ಎಂಬ ಹೇಳಿಕೆಯನ್ನು ಲೋಕಸಭೆಯಲ್ಲಿ ನೀಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷಗಳ ಸಂಸದರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರು. ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಲೇಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಿಂದ ತೆಗೆದು ಹಾಕಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top