fbpx
ಸಮಾಚಾರ

“ಅಯೋಧ್ಯೆಯಲ್ಲಿ ಮಸೀದಿ ಬೇಡ, ಮುಸ್ಲೀಮರಿಗೆ ಒಂದಿಂಚೂ ಭೂಮಿ ನೀಡಬಾರದು” ಸುಪ್ರೀಂ ತೀರ್ಪಿನ ವಿರುದ್ಧ ಪುರಿ ಸ್ವಾಮೀಜಿ ಅಸಮಾಧಾನ

“ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಒಂದಿಂಚೂ ಭೂಮಿ ನೀಡಬಾರದು” ಎಂದು ಹೇಳುವ ಮೂಲಕ ಅಯೋಧ್ಯೆ ತೀರ್ಪಿನ ಬಗ್ಗೆ ನಿಶ್ಚಲಾನಂದ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

ಉಡುಪಿಯಲ್ಲಿ ಪೇಜಾವರ ಶ್ರೀಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ ದ್ವೈತ ಮತದ ಪುರಿ ಶ್ರೀಗಳು ಸುಪ್ರೀಂ ಕೋರ್ಟಿಗಿಂತ ಪಾರ್ಲಿಮೆಂಟ್ ದೊಡ್ಡದು, ಸುಪ್ರೀಂ ತೀರ್ಪನ್ನು ತಿರಸ್ಕರಿಸಿ ಪಾರ್ಲಿಮೆಂಟ್ ಆಯೋಧ್ಯೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು, ಮಸೀದಿ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದರು.

ಅಯೋಧ್ಯೆಯಲ್ಲಿ ಮುಸ್ಲೀಮರಿಗೆ ಒಂದಿಂಚೂ ಭೂಮಿ ನೀಡಬಾರದು. ಅಯೋಧ್ಯೆಯನ್ನು ಮುಸಲ್ಮಾನರು ಮತ್ತೊಂದು ಮೆಕ್ಕಾ ಮಾಡಲು ತಯಾರಿ ನಡೆಸುತ್ತಾರೆ ನೋಡುತ್ತಿರಿ ಎಂದು ಪೇಜಾವರಶ್ರೀ ಮುಂದೆ ಕೋಪ ಹೊರಹಾಕಿದರು. ಸುಪ್ರೀಂ ಕೋರ್ಟಿಗಿಂತ ಪಾರ್ಲಿಮೆಂಟ್ ದೊಡ್ಡದು. ಪಾರ್ಲಿಮೆಂಟಲ್ಲಿ ಬಿಜೆಪಿಗೆ ಬಹುಮತ ಇದೆ. ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದು ಮಾಡಲಿ ಎಂದರು.

ಧಾರ್ಮಿಕ ವಿಚಾರದಲ್ಲಿ ಸಂತರೇ ಸುಪ್ರೀಂ. ಸುಪ್ರೀಂ ಕೋರ್ಟ್ ಯಾಕೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸಿ ಸಂವಿಧಾನದ ಹೆಸರಿನಲ್ಲಿ ಎಲ್ಲವನ್ನೂ ಪಾಲಿಸುತ್ತಾ ಹೋದರೆ, ವರ್ಣಾಶ್ರಮ ಧರ್ಮವನ್ನು ಪಾಲಿಸುವವರು ಯಾರು ಎಂದು ನಿಶ್ಚಲಾನಂದ ಸ್ವಾಮೀಜಿ ಎಂದು ಗುಡುಗಿದರು.

ಮುಸ್ಲೀಮರು ಭಾರತದಲ್ಲಿ ಇನ್ನೊಂದು ಮೆಕ್ಕಾ ಮಾಡುವುದಕ್ಕೆ ಹೊರಟಿದ್ದಾರೆ. ಹಿಂದುಗಳ ಉದಾರತೆಯನ್ನು ಯಾರೂ ದುರ್ಬಲತೆ ಎಂದು ಭಾವಿಸಬಾರದು. ಅಯೋಧ್ಯೆಯಲ್ಲಿ ಮಾತ್ರವಲ್ಲ ದೇಶದ ಎಲ್ಲಿಯೂ ಬಾಬ್ರಿ ಹೆಸರಿನ ಮಸೀದಿ ಸ್ಥಾಪನೆಯಾಗಬಾರದು. ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ, ಗೋವಾ, ಮಹಾರಾಷ್ಟ್ರ, ಕಾಶ್ಮೀರದಲ್ಲಿ ನೋಡಿದ್ದೇವೆ ಎಂದು ಹರಿಹಾಯ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top