fbpx
ಸಮಾಚಾರ

ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೇ ಪ್ರಮುಖ ಹುದ್ದೆಗೆ ಉದ್ಧವ್ ಠಾಕ್ರೆ ರಾಜೀನಾಮೆ!

ಮಹಾರಾಷ್ಟ್ರದ 18ನೇ ಮುಖ್ಯಮಂತ್ರಿಯಾಗಿ ಗುರುವಾ ಸಂಜೆ ಪ್ರಮಾಣ ವಚನ ಸ್ವೀಕರಿಸಿದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಇಷ್ಟು ದಿನ ತಾವು ನಿರ್ವಹಿಸುತ್ತಿದ್ದ ಪ್ರಮುಖ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ಪಕ್ಷದ ಮುಖವಾಣಿ “ಸಾಮ್ನಾ” ಪತ್ರಿಕೆ ಸಂಪಾದಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬಳಿಕ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರು ಸಾಮ್ನಾ ಪತ್ರಿಕೆಗೆ ನೂತನ ಸಂಪಾದಕರಾಗಿ ಅಧಿಕಾರ ವಹಿಸಿಕೊಂಡರು.

ಅಂದಹಾಗೆ 59 ವರ್ಷದ ಉದ್ಧವ್ ಠಾಕ್ರೆ, ಮನೋಹರ್ ಜೋಶಿ ಮತ್ತು ನಾರಾಯಣ ರಾಣೆ ನಂತರ ಶಿವಸೇನೆಯಿಂದ ಮಹಾರಾಷ್ಟ್ರದ ಮೂರನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಠಾಕ್ರೆ ಕುಟುಂಬದಿಂದ ಉದ್ಧವ್ ಠಾಕ್ರೆ ಮೊದಲ ಮುಖ್ಯಮಂತ್ರಿಯಾಗಿದ್ದು, ಶಿವಾಜಿ ಪಾರ್ಕ್‌ನಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top