fbpx
ಸಮಾಚಾರ

ಶ್ರೀಲಂಕಾಗೆ ₹ 3 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ

3 ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಶ್ರೀಲಂಕಾದ ನೂತನ ಅಧ್ಯಕ್ಷ ಗೊಟಬಯ ರಾಜಪಕ್ಸ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಮಾತುಕತೆ ಫಲಪ್ರದವಾದ ಬೆನ್ನಲ್ಲೇ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕಾಗಿ 50 ಮಿಲಿಯನ್‌ ಡಾಲರ್‌(300 ಕೋಟಿ ರು.) ಸೇರಿದಂತೆ ಶ್ರೀಲಂಕಾದ ಒಟ್ಟಾರೆ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾಕ್ಕೆ 450 ಮಿಲಿಯನ್‌ ಡಾಲರ್‌(3230 ಕೋಟಿ ರು.) ಆರ್ಥಿಕ ನೆರವನ್ನು ಘೋಷಣೆ ಮಾಡಿದ್ದಾರೆ.

ಶ್ರೀಲಂಕಾದಲ್ಲಿ ಅಧ್ಯಕ್ಷ ಗೊಟಬಯ ರಾಜಪಕ್ಸ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ಮೊದಲ ದ್ವಿಪಕ್ಷೀಯ ಮಾತುಕತೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಈ ಭರವಸೆ ನೀಡಿದರು. ಶ್ರೀಲಂಕಾದ ನೂತನ ಅಧ್ಯಕ್ಷರನ್ನು ಆಹ್ವಾನಿಸಿದ ಮೊದಲ ದೇಶ ಭಾರತವಾಗಿದ್ದು, ಅಧ್ಯಕ್ಷ ರಾಜಪಕ್ಸ ಅವರು ತಮ್ಮ ಮೊದಲ ಅತಿಥಿಯಾಗಿ ದೇಶಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಗೆ ಅವರಿಗೆ ಆಹ್ವಾನ ನೀಡಿದರು.

ನೆರೆಯ ದೇಶವು ವೇಗದ ಅಭಿವೃದ್ಧಿ ಸಾಧಿಸಲು ಭಾರತದಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ರಾಜಪಕ್ಸೆ ಅವರಿಗೆ ಮೋದಿ ಭರವಸೆ ನೀಡಿದ್ದಾರೆ. ಶ್ರೀಲಂಕಾದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ₹ 3 ಸಾವಿರ ಕೋಟಿ ನೀಡಲಾಗುತ್ತಿದೆ. ಇದರ ಜೊತೆ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಪ್ರತ್ಯೇಕ ನೆರವು ನೀಡಲಾಗುತ್ತಿದೆ. ಇದೇ ಏಪ್ರಿಲ್‌ನಲ್ಲಿ ಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಸಭೆ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಭಯೋತ್ಪಾದನೆ ವಿರುದ್ಧದ ಹೋರಾಟಕ್ಕಾಗಿ ಉಭಯ ರಾಷ್ಟ್ರಗಳ ಸಹಕಾರ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಿದ್ದೇವೆ’ ಎಂದು ಹೇಳಿದರು. ಏತನ್ಮದ್ಯೆ ಗೊಟಬಯ ರಾಜಪಕ್ಸ ”ನನ್ನ ಅವಧಿಯಲ್ಲಿಭಾರತ- ಶ್ರೀಲಂಕಾ ನಡುವಿನ ಬಾಂಧವ್ಯವನ್ನು ಅತ್ಯಂತ ಎತ್ತರದ ಮಟ್ಟಕ್ಕೆ ಒಯ್ಯಲು ಬಯಸುತ್ತೇನೆ,” ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top