fbpx
ಸಮಾಚಾರ

“ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಿ ಸಾಯಿಸಬೇಕು” ಸಂಸತ್​​ನಲ್ಲಿ ಜಯ ಬಚ್ಚನ್ ಆಕ್ರೋಶ

ತೆಲಂಗಾಣದಲ್ಲಿ ನಡೆದ ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಇಡೀ ದೇಶವನ್ನೆ ಬೆಚ್ಚಿಬೀಳಿಸಿದೆ. ಪಶು ವೈದ್ಯೆ ಹತ್ಯೆ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜೊತೆಗೆ ದಕ್ಷಿಣ ಭಾರತೀಯ ಚಿತ್ರರಂಗದ ಕಲಾವಿದರು ಕೂಡ ಪ್ರಿಯಾಂಕಾ ರೆಡ್ಡಿ ಹತ್ಯೆ ವಿರದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಇಂದು ರಾಜ್ಯ ಸಭೆಯಲ್ಲೂ ಈ ವಿಚಾರ ಪ್ರತಿಧ್ವನಿಸಿದೆ. ಅತ್ಯಾಚಾರ ಅಪರಾಧಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರು, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ವ್ಯವಸ್ಥೆ ಆಗಬೇಕು ಎಂದು ಕರೆ ನೀಡಿದ್ದಾರೆ.

 

 

ಈ ಕುರಿತು ಮೇಲ್ಮನೆ ಕಲಾಪದಲ್ಲಿ ಮಾತನಾಡಿದ ಅವರು, ಇಂತಹ ಕ್ರೂರ ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಿ ಗಲ್ಲಿಗೇರಿಸಬೇಕು. ಸರ್ಕಾರದಿಂದ ಈ ಕುರಿತು ಸ್ಪಷ್ಟ ಹಾಗೂ ದಿಟ್ಟ ಉತ್ತರವನ್ನು ಜನತೆ ನಿರೀಕ್ಷಿಸುತ್ತಿದ್ದಾರೆ. ಏನಾಗಿದೆ ಎಂಬುದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ. ಈ ಪ್ರಕರಣವನ್ನು ಸರ್ಕಾರ ಹೇಗೆ ಬೇಧಿಸುತ್ತದೆ, ಸಂತ್ರಸ್ತೆ ಕುಟುಂಬಕ್ಕೆ ಹೇಗೆ ನ್ಯಾಯ ಒದಗಿಸುತ್ತದೆ ಎಂದು ಕಾಯುತ್ತಿದ್ದಾರೆ ಎಂದು ಭಾವುಕರಾದರು.

ಘಟನೆ ನಡೆದ ಸ್ಥಳದಲ್ಲಿ ಅಧಿಕಾರಿಗಳು ಭದ್ರತೆ ಒದಗಿಸಲು ಯಾಕೆ ವಿಫಲರಾದರು, ಭದ್ರತಾ ಸಿಬ್ಬಂದಿ ತಮ್ಮ ಕೆಲಸವನ್ನು ಮಾಡುವಲ್ಲಿ ವಿಫಲವಾಗಿದ್ದಾರೆ. ಆರೋಪಿಗಳು ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ, ಇಂತಹವರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹೈದರಾಬಾದ್​ನಲ್ಲಿ ಕಳೆದ ವಾರ 26 ವರ್ಷದ ಪಶುವೈದ್ಯೆಯೊಬ್ಬರ ಮೇಲೆ ನಾಲ್ಕು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆಗೈದಿದ್ದರು. ಮಹಿಳೆಯ ಟಯರ್ ಪಂಕ್ಚರ್ ಆದಾಗ ಸಹಾಯ ಮಾಡುವ ನೆಪದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು. ಈ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top