fbpx
ಸಮಾಚಾರ

“ಕೇಂದ್ರದಿಂದ ಸ್ಥಾಪಿತವಾಗುವ ಶಿಕ್ಷಣ, ಉದ್ಯೋಗ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಕನಿಷ್ಠ 25% ಮೀಸಲಾತಿ ನೀಡಬೇಕು” ಸಂಸತ್ ನಲ್ಲಿ ಜಿಸಿ ಚಂದ್ರಶೇಖರ್ ಮನವಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ದಿಮೆ ಮತ್ತು ಖಾಸಗಿ ಕಾಲಗಳಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎಂಬ ಕೂಗು ಪದೇ ಪದೇ ಕೇಳಿಬರುತ್ತಿರುತ್ತದೆ. ಅಷ್ಟೇ ಅಲ್ಲದೆ ಅಂದ್ರ ಪ್ರದೇಶ, ತೆಲಂಗಾಣ, ಮಧ್ಯ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳ ಸರ್ಕಾರವು ಆಯಾ ರಾಜ್ಯದ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಲು ಮಸೂದೆ ಜಾರಿ ಮಾಡಲಾಗಿದೆ. ಆ ರಾಜ್ಯಗಳಂತೆ ನಮ್ಮ ಕರ್ನಾಟಕದಲ್ಲೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಆದ್ಯತೆ ಸಿಗಬೇಕು ಎಂಬ ಕೂಗು ಮತ್ತೆ ಶುರುವಾಗಿದೆ.

ಕರ್ನಾಟಕದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು” ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದ ಜಿಸಿ ಚಂದ್ರಶೇಖರ್ ಈಗ ಮತ್ತೊಮ್ಮೆ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಶುಕ್ರವಾರ ಸಂಸತ್ ನಲ್ಲಿ ಸಂಸದ ಜಿಸಿಸಿ ನಮ್ಮ ಕರ್ನಾಟಕದಲ್ಲೂ ಈ ರೀತಿಯ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿದ್ದಾರೆ.

 

 

ಈ ಬಗ್ಗೆ ಸಂಸತ್ ನಲ್ಲಿ ಮಾತನಾಡಿದ ಜಿಸಿ ಚಂದ್ರಶೇಖರ್ ಅವರು “ಅನೇಕ ರಾಜ್ಯಗಳು ಅಲ್ಲಿನ ಸ್ಥಳೀಯರಿಗೆ ಅವಕಾಶಕೊಡುತ್ತಿದ್ದು ಅಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಗಳು ಸ್ಥಳೀಯರಿಗೆ ಆದ್ಯತೆ ಕೊಡಬೇಕೆಂದು ಮಸೂದೆ ಮಂಡಿಸಿವೆ, ಈ ವಿಷಯವಾಗಿ ಕರ್ನಾಟಕದಲ್ಲಿ ಈ ಮಣ್ಣಿನ ಮಕ್ಕಳಿಗೆ ಆದ್ಯತೆ ಕೊಡಬೇಕು ಮತ್ತು ಈ ನಿಟ್ಟಿನಲ್ಲಿ ಒಂದು ಕಡ್ಡಾಯವಾದ ನಿಯಮಾವಳಿಯನ್ನು ಕರ್ನಾಟಕ ಸರ್ಕಾರ ಹೊರಡಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ದಿಮೆ ಮತ್ತು ಖಾಸಗಿ ಕಾಲಗಳಲ್ಲಿಯೂ ಕನ್ನಡಿಗರಿಗೆ ಕನಿಷ್ಠ ಶೇ. 25ರಷ್ಟು ಮೀಸಲಾತಿ ನೀಡಬೇಕು” ಎಂದು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳ ಭಾಷಾ ಆಯ್ಕೆ ಬಗ್ಗೆ ಮಾತನಾಡಿದ ಸಂಸದರು “ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರವೇ ನಡೆಯುತ್ತಿರುವುದರಿಂದ ನಗರ ಪ್ರದೇಶದ ವಿದ್ಯಾರ್ಥಿಗಳ ಜೊತೆ ಸ್ಪರ್ಧೆ ನಡೆಸಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಷ್ಟ ಪಡುತ್ತಿದ್ದಾರೆ. IIT, IIM ನಂತಹ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ನೀಟ್ ನಂತಹ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗಳನ್ನು ಬಾರೆಯಲು ಅವಕಾಶ ನೀಡುತ್ತಿಲ್ಲ. ಹಾಗಾಗಿ ಸ್ಥಳೀಯ ಪ್ರತಿಭಾವಂತರು ಅವಕಾಶ ವಂಚಿತರಾಗುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು

ಈ ಸಮಸ್ಯೆಯನ್ನು ಉದಾಹರಣೆ ಸಹಿತ ವಿವಸಿರಿದ ಅವರು ” ನಮ್ಮ ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಕಾನೂನು ಶಾಲೆ ಬೆಂಗಳೂರು ಒಟ್ಟು 160 ಸೀಟುಗಳಿದ್ದು ಕನ್ನಡಿಗರಿಗೆ ದಕ್ಕಿರುವುದು ಕೇವಲ 8 ಸೀಟುಗಳು ಮಾತ್ರ. ಧಾರವಾಡದ ಐಐಟಿಯಲ್ಲಿ 120 ಸೀಟುಗಳಲ್ಲಿ ಕನ್ನಡಿಗರಿಗೆ ಸಿಕ್ಕಿರುವುದು ಕೇವಲ 6 ಸೀಟು ಮಾತ್ರ. ಹಾಗಾಗಿ ಇಂಥ ರಾಷ್ಟ್ರೀಯ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂಬುದು ತಜ್ಞರ ವಾದವಾಗಿದೆ” ಎಂದು ಹೇಳಿದರು

“ನನ್ನ ಅಭಿಪ್ರಾಯದ ಪ್ರಕಾರ ಈ ರಾಷ್ಟ್ರೀಯ ಸಂಸ್ಥೆಗಳು ಸ್ಥಳೀಯ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ಇದ್ದರೇ ಗ್ರಾಮೀಣ ಪ್ರದೇಶದ ಹಿಂದುಳಿದ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ. ಇದರಿಂದ ಶಿಕ್ಷಣದ ಮೂಲದ ಉದ್ದೇಶ ವಿಫಲವಾಗುತ್ತದೆ. ಹಾಗಾಗಿ ಕನ್ನಡಿಗರಿಗೆ ಕನಿಷ್ಠ 25% ಮೀಸಲಾತಿ ನೀಡಬೇಕೆಂದು ಮನವಿ ಮಾಡಿಕೊಳ್ಳುತೇನೆ” ಎಂದು ಜಿಸಿ ಚಂದ್ರಶೇಖರ್ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top