fbpx
ಸಮಾಚಾರ

ಉಪ ಚುನಾವಣೆ ಫಲಿತಾಂಶ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿ

ಕರ್ನಾಟಕದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 12 ಸ್ಥಾನ ಗೆದ್ದಿದ್ದು, ಕಾಂಗ್ರೆಸ್‌ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ. ಆದರೆ ಜೆಡಿಎಸ್‌ಗೆ ಯಾವುದೇ ಸ್ಥಾನ ಕೂಡ ಸಿಕ್ಕಿಲ್ಲ. ಇನ್ನು ಈ ಬಗ್ಗೆ ಕುಮಾರಸ್ವಾಮಿ ಮಾತ್ರ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಅಚ್ಚರಿ ಟ್ವೀಟ್ ಮಾಡಿ, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

 

 

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಇದೊಂದು ”ಅಸಹ್ಯ” ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು. ಕುರುಡು ಕಾಂಚಾಣ ಕುಣಿಯುತಲಿತ್ತು, ಕಾಲಿಗೆ ಬಿದ್ದವರ ತುಳಿಯುತಲಿತ್ತು ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಸರ್ಕಾರ ರಕ್ಷಿಸಲು ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಈ ರೀತಿಯಾಗಿ ಟ್ವೀಟ್ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top