fbpx
ಸಮಾಚಾರ

ಬೈ ಎಲೆಕ್ಷನ್ ಸೋಲು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನೇಶ್ ಗುಂಡೂರಾವ್!

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಜನತಾ ನ್ಯಾಯಾಲಯ ಒಳ್ಳೆಯ ತೀರ್ಪು ನೀಡುತ್ತೆ ಎಂಬ ನಿರೀಕ್ಷೆಗಳಿದ್ದವು. ಉಪ ಚುನಾವಣೆಯಲ್ಲಿಯೂ ಎಲ್ಲ ನಾಯಕರು ಶಕ್ತಿಮೀರಿ ಕೆಲಸ ಮಾಡಿದ್ದಾರೆ. ಚುನಾವಣೆಯಲ್ಲಿ ನಾವು ಗೆಲ್ಲಬೇಕು, ನಮಗೆ ಮೋಸ ಮಾಡಿದವರನ್ನು ಸೋಲಿಸಬೇಕೆಂದು ಎಲ್ಲರೂ ಪ್ರಯತ್ನ ಮಾಡಿದ್ದಾರೆ.

ಎಲ್ಲರ ಇಚ್ಛಾನುಸಾರವಾಗಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಆದ್ರೆ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬರಲಿಲ್ಲ. ನಮ್ಮ ಪಕ್ಷಕ್ಕೆ ಮೋಸ ಮಾಡಿದವರು ಗೆದ್ದಾಗ ನೋವು ಆಗುತ್ತದೆ. ಆದ್ರೂ ಗೆದ್ದ ಎಲ್ಲ ಅಭ್ಯರ್ಥಿಗಳಿಗೂ ನಾನು ಶುಭಾಶಯ ತಿಳಿಸುತ್ತೇನೆ ಎಂದರು.

15 ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನ ಗಳಿಸಿತ್ತು. ಆಡಳಿತರೂಢ ಬಿಜೆಪಿ 12 ರಲ್ಲಿ ಗೆಲುವು ಸಾಧಿಸಿತ್ತು. ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹೊಸಕೋಟೆಯಲ್ಲಿ ಗೆಲುವಿನ ನಗೆ ಬೀರಿದ್ದರು. ಹೈಕಮಾಂಡ್ ಕೂಡ ರಾಜ್ಯ ಪ್ರದೇಶ ಕಾಂಗ್ರೆಸಿನಲ್ಲಿ ಭಾರಿ ಬದಲಾವಣೆಗಳನ್ನು ತರಲು ಬಯಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top