fbpx
ಸಮಾಚಾರ

ಉಪಚುನಾವಣೆ ಫಲಿತಾಂಶ: ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ ಸಿದ್ದರಾಮಯ್ಯ!

15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಆ ಕ್ಷೇತ್ರದ ಮತದಾರರು ನೀಡಿರುವ ತೀರ್ಪನ್ನು ನಾನು ಗೌರವಿಸಿ ಒಪ್ಪಿಕೊಂಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯನವರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಉಳಿವಿನ ದೃಷ್ಟಿಯಿಂದ ಪಕ್ಷಾಂತರಿಗಳಿಗೆ, ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ಕೊಡುತ್ತಾರೆ, ಅವರಿಗೆ ಪಾಠ ಕಲಿಸುತ್ತಾರೆ ಎಂದು ನಿರೀಕ್ಷೆ ಮಾಡಿದ್ದೆ. ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದು ನೋವಿನಿಂದ ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ವಿಪಕ್ಷ ನಾಯಕನಾಗಿ ಮುಂದುವರಿಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಷ್ಟೇ ಅಲ್ಲದೇ ಉಪಚುನಾಚವಣೆ ಸೋಲಿನ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿಗಳು ಲಭ್ಯವಾಗಿಲ್ಲ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top