fbpx
ಸಮಾಚಾರ

ಬೆಂಗಳೂರು ನಗರಸಭೆಯಲ್ಲಿ 179 ಹುದ್ದೆಗಳ ನೇಮಕಾತಿ, ಅರ್ಹತೆ:- ಕನ್ನಡ ಗೊತ್ತಿರಬೇಕು.

ಬೆಂಗಳೂರು ನಗರ ಜಿಲ್ಲೆಯ ನಗರಸಭೆ, ಹೆಬ್ಬಗೋಡಿ, ಅತ್ತಿಬೆಲೆ ಮತ್ತು ಚಂದಾಪುರ ಪುರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಅಹ್ವಾನಿಸಲಾಗಿದೆ.

ಖಾಲಿ ಇರುವ 179 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆ:
ಕನ್ನಡ ಮಾತನಾಡಲು ಗೊತ್ತಿರಬೇಕು.

ವಯೋಮಿತಿ:
ಡಿಸೆಂಬರ್ 2,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಹೇಗೆ?
ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಸಂಬಂಧಪಟ್ಟ ಪೌರಾಯುಕ್ತರು / ಮುಖ್ಯಾಧಿಕಾರಿಗಳಿಂದ ದೃಢೀಕರಿಸಿ ಲಗತ್ತಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06-01-2020

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, 4ನೇ ಮಹಡಿ, ಬೆಂಗಳೂರು ನಗರ ಜಿಲ್ಲೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top