fbpx
ಸಮಾಚಾರ

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆಸ್ಪತ್ರೆಗೆ ದಾಖಲು.

ಮಾಜಿ ಭೂಗತ ದೊರೆ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಮುತಪ್ಪ ರೈ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅವರನ್ನು ಬುಧವಾರ ರಾತ್ರಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೆಲ ತಿಂಗಳಿನ ಹಿಂದೆಯಷ್ಟೇ ಮುತ್ತಪ್ಪ ರೈ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಚೆನ್ನೈನ ಅಪೋಡ ಆಸ್ಪತ್ರೆಯಲ್ಲೂ ಕೂಡ ಒಂದು ತಿಂಗಳು ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಇದೀಗ ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾದ ಹಿನ್ನೆಲೆಯಲ್ಲಿ ಮತ್ತೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುತ್ತಪ್ಪ ರೈ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಕಿಮೋ ಥೆರೆಪಿ ಮತ್ತು ಕಿಡ್ನಿ ಚೆಕ್ ಅಪ್ ಮಾಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಡಾನ್ ಮುತ್ತಪ್ಪ ರೈ, ಪ್ರಸ್ತುತ ಜೈ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾಗಿದ್ದು, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ‘ಸಮಾಜ ಸೇವಕ’ ಹೆಸರಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುತ್ತಪ್ಪ ರೈ ಅವರು ರಿಯಲ್ ಎಸ್ಟೇಟ್ ಉದ್ಯಮಪತಿಗಳೂ ಆಗಿದ್ದಾರೆ.

ಕಳೆದ ವರ್ಷ ಆಯುಧ ಪೂಜೆಯ ವೇಳೆ ತಮ್ಮ ಮನೆಯಲ್ಲಿನ ಶಸ್ತ್ರಾಸ್ತ್ರ ಇಟ್ಟು ಪೂಜೆ ನಡೆಸುತ್ತಿರುವ ರೈ ಅವರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಹಾಗಾಗಿ ಸಿಐಡಿ ಪೊಲೀಸರು ರೈಗೆ ನೋಟಿಸ್ ಕೊಟ್ಟಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top