fbpx
ಸಮಾಚಾರ

KGF-2 ಚಿತ್ರತಂಡದಿಂದ ಹೊರಬಿತ್ತು ಹೊಸ ಸುದ್ದಿ!

2018ರಲ್ಲಿ ಬಿಡುಗಡೆಯಾಗಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಮಾಡಿತ್ತು. ಕೆಜಿಎಫ್-2 ಚಿತ್ರತಂಡ ಸರಳವಾಗಿ ಮುಹೂರ್ತ ಮಾಡಿಕೊಂಡು ಚಿತ್ರೀಕರಣವನ್ನು ಆರಂಭಿಸಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಜಿಎಫ್-2 ಚಿತ್ರದ ಶೂಟಿಂಗ್ ಸೆಟ್ ಫೋಟೋಗಳು ಸದ್ದು ಮಾಡಿದ್ದವು. ಕೆಜಿಎಫ್ ನಿರೀಕ್ಷೆಗಳ ಪರ್ವತವನ್ನೇ ಹುಟ್ಟಿಸಿದ್ದು, ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಕೆಜಿಎಫ್ 2ಗಾಗಿ ದೇಶವೇ ಎದುರು ನೋಡುತ್ತಿದೆ.

 

 

ಈಗಾಗಲೇ ಚಾಪ್ಟರ್ 2 ಶೂಟಿಂಗ್ ನಡೆಯುತ್ತಿದ್ದು, ಯಶ್ ಜೊತೆ ಸಂಜಯ್ ದತ್, ರವೀನಾ ಟಂಡನ್ ಕೂಡ ಭಾಗಿಯಾಗುತ್ತಿದ್ದಾರೆ. ಈ ನಡುವೆ ಚಾಪ್ಟರ್ 2 ಬಗ್ಗೆ ಅಪ್ಡೇಟ್ ಕೊಡಿ ಎಂದು ಚಿತ್ರತಂಡಕ್ಕೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಇದೀಗ, ಅಭಿಮಾನಿಗಳ ಬೇಡಿಕೆ ಪುರಸ್ಕರಿಸಿ ಚಿತ್ರತಂಡ ದೊಡ್ಡ ಸುದ್ದಿಯೊಂದನ್ನು ಬಹಿರಂಗಪಡಿಸಿದೆ. ಏನದು ಅಂತೀರಾ? ಮುಂದೆ ಓದಿ.

ಇದೇ ಡಿಸೆಂಬರ್ 21ರ ಸಂಜೆ 5.45ಕ್ಕೆ ಕೆಜಿಎಫ್: ಚಾಪ್ಟರ್ 2 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಫೇಸ್‍ಬುಕ್‌ನಲ್ಲಿ ಘೋಷಿಸಿದೆ. ಇದಕ್ಕೆ ಸಾಕಷ್ಟು ಕಾಮೆಂಟ್‍ಗಳು ಹರಿದುಬಂದಿದ್ದು ಫಸ್ಟ್ ಲುಕ್ ನಿರೀಕ್ಷೆಯಲ್ಲಿದ್ದೇವೆ, ಸಿನಿಮಾ ಯಾವಾಗ ರಿಲೀಸ್ ಎಂಬ ಕಾಮೆಂಟ್‌ಗಳು ಹರಿದುಬಂದಿವೆ.

ಜನವರಿ 8 ರಂದು ಟೀಸರ್​ ರಿಲೀಸ್​ ಆಗಲಿದೆ ಎಂದು ಈಗಾಗಲೇ ಘೋಷಿಸಲಾಗಿದೆ. ಅದಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಫಸ್ಟ್​ ಲುಕ್​ ಬಿಡುಗಡೆ ಮಾಡುವುದಾಗಿ ಹೇಳಿರುವುದರಿಂದ ಅಭಿಮಾನಿಗಳು ಯಶ್​ ಅವರು ಯಾವ ರೀತಿ ಕಾಣಿಸಿಕೊಂಡಿದ್ದಾರೆ ಅನ್ನೋದನ್ನ ನೋಡಲು ಕಾಯುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top