fbpx
ಸಮಾಚಾರ

ಪುನೀತ್ ಹೆಗಲಿಗೆ ಹೊಸ ಹೊಣೆ: ಹಣ ಪಡೆಯದೇ BMTC ರಾಯಭಾರಿಯಾದ ಅಪ್ಪು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಹಿಂದೆ ಸರ್ಕಾರದ ಹಲವು ಸಂಸ್ಥೆಗಳಿಗೆ, ಕರ್ನಾಟಕ ಸರ್ಕಾರದ ಹಲವು ಯೋಜನೆಗಳಿಗೆ ರಾಯಭಾರಿಯಾಗಿ ಕೆಲಸ ಮಾಡಿದ್ದಾರೆ. ಅದನ್ನೀಗ ಮತ್ತೆ ಮುಂದುವರಿಸಿಕೊಂಡು ಹೋಗಿರುವ ಅವರು ಬೆಂಗಳೂರು ಮಹಾನಗರ ಸಾರಿಗೆ ನಿಗಮದ ರಾಯಭಾರಿಯಾಗಿದ್ದಾರೆ.

 

 

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ನಿಯಂತ್ರಿಸುವ ಸಲುವಾಗಿ ಖಾಸಗಿ ವಾಹನಗಳನ್ನು ಬಿಟ್ಟು ಸರ್ಕಾರಿ ಬಸ್‍ಗಳನ್ನು ಆಶ್ರಯಿಸಿ ಎಂದು ಹೇಳುತ್ತಲೇ ಬಂದಿದ್ದಾರೆ, ಈಗ ಜನರನ್ನು ಪ್ರೇರೇಪಿಸುವ ಸಲುವಾಗಿ ಬಿಎಂಟಿಸಿಯು ಪವರ್‍ ಸ್ಟಾರ್ ಪುನೀತ್‍ರಾಜ್‍ಕುಮಾರ್ ಅವರನ್ನು ತಮ್ಮ ರಾಯಭಾರಿಯನ್ನಾಗಿ ಆಯ್ಕೆ ಆಗಿರುವುದರಿಂದ ಬಿಎಂಟಿಸಿ ಎಂಡಿ ಶಿಖಾ ಪುನೀತ್‍ರನ್ನು ಅಭಿನಂದಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟನೆ ಕಡಿಮೆ ಮಾಡಿ ಬಿಎಂಟಿಸಿಯಲ್ಲಿ ಹೆಚ್ಚು ಜನರು ಪ್ರಯಾಣಿಸುವಂತೆ ಪ್ರೇರೇಪಿಸಲು ರಾಯಭಾರಿಯಾಗಿ ನಟ ಪವರ್​ ಸ್ಟಾರ್​ ಪುನೀತ್​ ರಾಜ್ ಕುಮಾರ್​ ಅವರನ್ನು ಆಯ್ಕೆ ಮಾಡಲಾಗಿದೆ. ಬಿಎಂಟಿಸಿ ಬ್ರಾಂಡ್ ಅಂಬಾಸಿಡರ್ ಆಗಲು ಪುನೀತ್ ಯಾವುದೇ ಸಂಭಾವನೆ ಪಡೆದಿಲ್ಲ. ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಪುನೀತ್ ಒಪ್ಪಿಗೆ ನೀಡಿದ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top