fbpx
ಸಮಾಚಾರ

ಮುದ್ದಾದ ಮಗಳ ಫೋಟೋ ರಿವೀಲ್ ಮಾಡಿದ ನಟಿ ಶ್ರುತಿ ಹರಿಹರನ್

ನಾತಿಚರಾಮಿ ಚಿತ್ರದ ಬಳಿಕ ಚಿತ್ರರಂಗದಿಂದ ಸ್ವಲ್ಪ ದೂರ ಉಳಿದಿದ್ದ ಶ್ರುತಿ ಹರಿಹರನ್ ಸದ್ಯ ತಾಯಿ ಆಗಿದ್ದು ತಮ್ಮ ಮುದ್ದು ಮಗಳ ಲಾಲನೆ ಪಾಲನೆಯಲ್ಲಿ ಮಗ್ನರಾಗಿದ್ದಾರೆ. ಇದೀಗ ಶ್ರುತಿ ಹರಿಹರನ್ ತಮ್ಮ ಪುತ್ರಿಯ ವಿಡಿಯೋವನ್ನು ಮೊದಲ ಬಾರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

 

ಶ್ರುತಿ ಹರಿಹರನ್ ಅವರು ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಈವರೆಗೂ ಮಗಳ ಫೋಟೋವನ್ನು ರಿವೀಲ್ ಮಾಡಿರಲಿಲ್ಲ. ಹೀಗಾಗಿ ಅಭಿಮಾನಿಗಳು ಕೂಡ ಜೂ.ಶ್ರುತಿ ಹರಿಹರನ್​ ಫೋಟೋಗಾಗಿ ಕಾಯುತ್ತಿದ್ದರು.

ಇದರ ನಡುವೆ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನಟಿ ಶ್ರುತಿ, ಗಂಡ ರಾಮ್ ಮಗುವಿನ ಜೊತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿದ ಮಗಳು ಜಾನಕಿಯೊಂದಿಗಿನ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶ್ರುತಿ, ಗಂಡ ರಾಮ್ ಜೊತೆ ಮಗಳು ಜಾನಕಿಯನ್ನು ಕರೆದುಕೊಂಡು ಬಂದಿದ್ದರು. ಫೋಟೋಗಳಲ್ಲಿ ಈ ದಂಪತಿ ಮತ್ತು ಮಗಳು ಸೆರೆಯಾಗಿದ್ದು ಹೀಗೆ.

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top