fbpx
ಸಮಾಚಾರ

ನಿರ್ಭಯಾ ‘ಹತ್ಯಾ’ಚಾರಿಗೆ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಸುಪ್ರೀಂ!

ನಿರ್ಭಯಾ ಪ್ರಕರಣಕ್ಕೆ ಸಂಬಂಧಿದಂತೆ ಸುಪ್ರೀಂ ಕೋರ್ಟ್ ಇಂದು ದೋಷಿ ಅಕ್ಷಯ್ ಸಿಂಗ್ ದಾಖಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ. ನ್ಯಾಯಮೂರ್ತಿ ಆರ್. ಅನುಭೂತಿ ನೇತೃತ್ವದ ತ್ರಿಸದಸ್ಯ ಪೀಠ ಈ ಪ್ರಕರಣದಲ್ಲಿ ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದು ಆರೋಪಿ ಅಕ್ಷಯ್ ಕುಮಾರ್ ಸಿಂಗ್ ಗೆ ವಿಧಿಸಲಾಗಿರುವ ಗಲ್ಲುಶಿಕ್ಷೆಯನ್ನು ಎತ್ತಿ ಹಿಡಿದಿದೆ.

ನ್ಯಾಯಮೂರ್ತಿ ಆರ್.ಭಾನುಮತಿ, ಅಶೋಕ್ ಭೂಷಣ್ ಮತ್ತು ಕನ್ನಡಿಗ ಎಸ್.ಎ.ಬೋಪಣ್ಣ ಒಳಗೊಂಡ ನ್ಯಾಯಪೀಠ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ್ದು, ಅಪರಾಧಿಯ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.

ತನಿಖೆ ಸರಿಯಾಗಿ ನಡೆದಿಲ್ಲ ಎನ್ನುವ ವಾದವನ್ನು ಒಪ್ಪಲಾಗದು. ವಿಚಾರಣಾ ನ್ಯಾಯಾಲಯ, ಹೈಕೋರ್ಟ್‌ಗಳಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಬಳಿಕವೇ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ರೀತಿಯ ಲೋಪವಾಗಿಲ್ಲ. ಇದೀಗ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ನಿರ್ಭಯಾ ಹತ್ಯೆ ಪ್ರಕರಣದದಲ್ಲಿ ಸುಪ್ರೀಂ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದೆ. ಅಕ್ಷಯ್ ಕುಮಾರ್, ಪವನ್ ಗುಪ್ತಾ, ವಿನಯ್ ಶರ್ಮಾ, ಮುಖೇಶ್ ಸಿಂಗ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಾಲ್ವರು ಅಪರಾಧಿಗಳಲ್ಲಿ ಪವನ್ ಗುಪ್ತಾ, ವಿನಯ್ ಶರ್ಮಾ ಮತ್ತು ಮುಖೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ಈಗಾಗಲೇ ತಿರಸ್ಕೃತಗೊಂಡಿದೆ. ಕೊನೆಯ ಅಪರಾಧಿ ಅಕ್ಷಯ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಇದೀಗ ತಿರಸ್ಕೃತಗೊಳ್ಳುವ ಮೂಲಕ ನಾಲ್ವರಿಗೆ ಗಲ್ಲು ಶಿಕ್ಷೆ ಕಾಯಂ ಆಗಿದೆ.

ಡಿಸೆಂಬರ್ 16, 2012 ರಂದು ದೆಹಲಿಯಲ್ಲಿ ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿತ್ತು. ಆರು ಮಂದಿ ಕಾಮುಕರು ನಿರ್ಭಯಾಳ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿದ್ದರು. ಬಳಿಕ ಆಸ್ಪತ್ರೆಯಲ್ಲಿ ನಿರ್ಭಯಾ ಮೃತಪಟ್ಟಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top