fbpx
ಸಮಾಚಾರ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಗಂಗಾವತಿ ಪ್ರಾಣೇಶ್

ಪೌರತ್ವ ತಿದ್ದುಪಡಿ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ವಿಚಾರವಾಗಿ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿರುವಂತೆಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ಪ್ರಧಾನಿ ಮೋದಿ ಅವರಿಗೆ ಖ್ಯಾತ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೇ ಯಾವುದೇ ಸ್ವಾರ್ಥವಿಲ್ಲದೆ ರಾಷ್ಟ್ರದ ಏಳಿಗೆಯ ಪಣತೊಟ್ಟು ಕಾಯ್ದೆ ಜಾರಿ ಮಾಡಿದ್ದೀರಿ. ಇದಕ್ಕಾಗಿ ನಿಮಗೆ ಅಭಿನಂದನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

 

ದೇಶದಲ್ಲಿ ಸಮಾನತೆ, ಮಾನವೀಯ ಮೌಲ್ಯಗಳನ್ನು ನಿರಂತರವಾಗಿ ತಲುಪಿಸಲುವಲ್ಲಿ ಯಶಸ್ವಿಯಾಗಿದ್ದೀರಿ. ಇದೊಂದು ರೀತಿಯ ತಪಸ್ಸು ಎಂದು ಪ್ರಾಣೇಶ್ ಅವರು ಅಭಿನಂದನಾ ಪತ್ರದಲ್ಲಿ ಕೊಂಡಾಡಿದ್ದಾರೆ. ಅಲ್ಲದೆ ಇನ್ನೂ ಬಾಕಿ ಉಳಿದಿರುವ ಕಾನೂನುಗಳನ್ನೂ ಜಾರಿಗೆ ತರಲು ತಮಗೆ ಶಕ್ತಿ, ಆರೋಗ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಂದಹಾಗೆ ವಿವಾದಿತ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ಮಸೂದೆ ಸಂಸತ್ ನಲ್ಲಿ ಅನುಮೋದನೆ ಪಡೆದುಕೊಂಡು ಕಾನೂನಾಗಿದೆ. ಇದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಬಿಜೆಪಿ ಕೂಡ ವ್ಯಾಪಕವಾಗಿ ಇದರ ಕುರಿತು ಜನಜಾಗೃತಿ ಮಾಡುತ್ತಿದೆ. ಈಶಾನ್ಯ ಭಾರತದಲ್ಲಿ ಹಾಗೂ ದೆಹಲಿಯಲ್ಲಿ ಹಿಂಸಾಚಾರಗಳು ನಡೆಯುತ್ತಿವೆ. ಪ್ರತಿಭಟನೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.

ಒಂದು ಪುಟದ ಪತ್ರ ಬರೆದಿರುವ ಪ್ರಾಣೇಶ್, ಡಿವಿಜಿ ಅವರ ‘ಕಲ್ಲಾಗು ಬೆಟ್ಟದಡಿ’ ಎಂಬ ಕಗ್ಗವನ್ನು ಪ್ರಸ್ತಾಪಿಸಿದ್ದಾರೆ. ‘18 ವರ್ಷದ ಗುಜರಾತ್ ಮಾದರಿ ಮುಂದಿಟ್ಟುಕೊಂಡು ಆಡಳಿತ ನಡೆಸುತ್ತಿದ್ದೀರಿ. ಸಿಎಎ ಅಖಂಡ ಭಾರತದ ಪರಿಕಲ್ಪನೆಗೆ ಸಾಕ್ಷಿಯಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ರಾಜಕೀಯ ದುರುದ್ದೇಶ ಹಾಗೂ ಭಯೋತ್ಪಾದನೆಗೆ ಯತ್ನಿಸಿದ ನೆರೆ ರಾಷ್ಟ್ರಕ್ಕೆ ತಕ್ಕ ಉತ್ತರ ನೀವು ನೀಡಿದ್ದೀರಿ. ದೇಶದ ಅಭಿವೃದ್ಧಿಗೆ ಪ್ರಧಾನಿ ಕೈಗೊಂಡಿರುವ ಕ್ರಮ ಒಳ್ಳೆಯದು. ಭಯೋತ್ಪಾದಕರ ಎದೆ ನಡುಗುವಂತೆ ಕಾನೂನು ಜಾರಿ ಮಾಡಿದ್ದು ದೇಶ ಪ್ರೇಮಕ್ಕೆ ಸಾಕ್ಷಿಯಾಗಿದೆ ಎಂದು ಪತ್ರದಲ್ಲಿ ಪ್ರಾಣೇಶ್ ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top