fbpx
ಸಮಾಚಾರ

ಪೇಜಾವರ ಶ್ರೀ ನಿಧನ: ರಾಜ್ಯಾದ್ಯಂತ 3 ದಿನ ಶೋಕಚಾರಣೆ; ಬೆಂಗಳೂರಿನಲ್ಲಿ ಅಂತ್ಯಕ್ರಿಯೆ!

ಕರ್ನಾಟಕದ ಯತಿಗಳಲ್ಲಿಯೇ ಅತೀ ಹಿರಿಯ ಯತಿಗಳೆನಿಸಿಕೊಂಡಿದ್ದ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಇಂದು ಮುಂಜಾನೆ ಕೃಷ್ಣೈಕ್ಯರಾಗಿದ್ದಾರೆ. ಶ್ರೀಗಳವರ ಕೊನೆಯಾಸೆಯಂತೆ ಉಡುಪಿ ಪೇಜಾವರ ಮಠದಲ್ಲಿಯೇ ಕೃಷ್ಣ ಪರಮಾತ್ಮನಲ್ಲಿ ಲೀನರಾಗಿದ್ದಾರೆ.

ಮಧ್ಯಾಹ್ನ 12 ಗಂಟೆಯವರೆಗೂ ಉಡುಪಿಯಲ್ಲಿ ಸಾರ್ವಜನಿಕರಿಗೆ ಪೇಜಾವರ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶ್ರೀಗಳ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೊನೆಗೆ ವಿದ್ಯಾಪೀಠದಲ್ಲಿ ಸರ್ಕಾರದ ಸಕಲ ಗೌರವದೊಂದಿಗೆ ಪೇಜಾವರ ಶ್ರೀಗಳ ಬೃಂದಾವನ ಮಾಡಲಾಗುತ್ತದೆ.

ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, “ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಆಚರಿಸಲು ಸೂಚಿಸಲಾಗಿದೆ. ಅಲ್ಲದೆ ಅವರನ್ನು ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ ಮಾಡಬೇಕಿರುವುದರಿಂದ ಸ್ಥಳಾಂತರಿಸಬೇಕಿದೆ. ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ” ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top