fbpx
ಸಮಾಚಾರ

ರೈಲ್ವೆ ಇಲಾಖೆ ನೇಮಕಾತಿ: 3553 ಹುದ್ದೆಗಳಿಗೆ ಅರ್ಜಿ ಅಹ್ವಾನ!

ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆ ವಿಭಾಗವು 2020ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ಅಧಿಕೃತ ವೆಬ್ ಸೈಟಿನಲ್ಲಿ ಈ ಬಗ್ಗೆ ಅಧಿಕೃತ ಪ್ರಕಟಿಸಿದೆ. ಒಟ್ಟು 3553 ಹುದ್ದೆಗಳಿದ್ದು, ಅಪ್ರೆಂಟಿಸ್ ಹುದ್ದೆಗೆ ಸೇರಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 06ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ವಿದ್ಯಾರ್ಹತೆ:
ಶೇ.50 ಅಂಕಗಳೊಂದಿಗೆ SSLC (10ನೇ ತರಗತಿ) ಪಾಸ್‌ ಜೊತೆಗೆ ಸಂಬಂಧಿಸಿದ ಅಪ್ರೆಂಟಿಸ್‌ ಹುದ್ದೆಗಳಿಗೆ ಅಗತ್ಯವಿರು ಐಟಿಐ ಟ್ರೇಡ್‌ನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ, ಗರಿಷ್ಟ 24 ವರ್ಷ ವಯಸ್ಸು ನಿಗದಿಪಡಿಸಲಾಗಿದ್ದು, SC/ST ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ 100 ರು. ಹಾಗೂ SC,ST,PwD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮೇಲೆ ಶೇಕಡ ಅಂಕಗಳ ಆಧಾರದ ಮೇಲೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಲಿಂಕ್‌ಗಾಗಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top