fbpx
ಸಮಾಚಾರ

ಬೆಳ್ಳಂ ಬೆಳಗ್ಗೆ ರಶ್ಮಿಕಾ ಮಂದಣ್ಣಗೆ ಐಟಿ ಶಾಕ್​; ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ!

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಹುಟ್ಟೂರು ವಿರಾಜಪೇಟೆಯಲ್ಲಿರುವ ಮನೆಗೆ ಬೆಳಗ್ಗೆ ಟ್ಯಾಕ್ಸಿ ಮೂಲಕ ಆಗಮಿಸಿದ ಅಧಿಕಾರಿಗಳು ದಿಢೀರ್​ ಭೇಟಿ ನಿಡಿ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾರೆ. ಸದ್ಯ ಹೈದರಾಬಾದಿನಲ್ಲಿ ಚಿತ್ರೀಕರಣದಲ್ಲಿರುವ ರಶ್ಮಿಕಾ ಮಂದಣ್ಣಗೆ ಮೈಸೂರು ವಿಭಾಗದ ಐಟಿ ಅಧಿಕಾರಿಗಳು ಸಮನ್ಸ್‌ ಜಾರಿ ಮಾಡಿದ್ದಾರೆ. ಕೂಡಲೇ ವಿರಾಜಪೇಟೆಗೆ ಬರುವಂತೆ ಸೂಚಿಸಲಾಗಿದೆ.

ರಶ್ಮಿಕಾ ಮಂದಣ್ಣ ಚಲನಚಿತ್ರರಂಗದಲ್ಲಿ ಮೋಸ್ಟ್ ಡಿಮ್ಯಾಂಡಬಲ್ ನಟಿಯಾಗಿದ್ದಾರೆ. ಸಹಜವಾಗಿ ಸಂಭಾವನೆಯೂ ಹೆಚ್ಚಾಗಿಯೇ ಇದೆ. ಈ ನಿಟ್ಟಿನಲ್ಲಿ ಐಟಿ ದಾಳಿ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಯಶಸ್ಸು ಸಿಕ್ಕ ಮೇಲೆ ರಶ್ಮಿಕಾ ಸಂಭಾವನೆ ಕೋಟಿದಾಟಿದ್ದು, ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಸಿನಿಮಾ ಮಾತ್ರವಲ್ಲದೆ ಜಾಹೀರಾತುಗಳು ಕೂಡ ರಶ್ಮಿಕಾ ಅದಾಯದ ಮೂಲವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top