fbpx
ಸಮಾಚಾರ

ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡಿಗ ಕ್ರಿಕೆಟರ್ ಕರುಣ್ ನಾಯರ್

ಕರ್ನಾಟಕದ ಸ್ಟಾರ್‌ ಬ್ಯಾಟ್ಸ್‌ಮನ್‌ ಹಾಗೂ ಭಾರತ ಟೆಸ್ಟ್‌ ತಂಡವನ್ನು ಪ್ರತಿನಿಧಿಸಿರುವ ತಾರೆ ಕರುಣ್‌ ನಾಯರ್ ತಮ್ಮ ದೀರ್ಘಕಾಲದ ಪ್ರೇಯಸಿ ಸಾನ್ಯಾ ಟಕಾರಿವಾಲ ಅವರೊಟ್ಟಿಗೆ ಸಾಂಸಾರಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 27 ವರ್ಷದ ಬಲಗೈ ಬ್ಯಾಟ್ಸ್‌ಮನ್‌ ಕರುಣ್‌ ನಾಯರ್‌ ತಮ್ಮ ಪ್ರೇಯಸಿಯೊಂದಿಗೆ ಉದಯ್‌ಪುರದಲ್ಲಿ ಸಪ್ತಪದಿ ತುಳಿದಿದ್ದಾರೆ.

ಕರುಣ್ ನಾಯರ್ ಅವರ ವಿವಾಹ ಸಂಭ್ರಮಾಚರಣೆಯಲ್ಲಿ ಭಾರತೀಯ ಕ್ರಿಕೆಟಿಗರಾದ ಶ್ರೇಯಸ್ ಅಯ್ಯರ್, ವರುಣ್ ಆರನ್, ಯುಜ್ವೇಂದ್ರ ಚಾಹಲ್, ಶಾರ್ದುಲ್ ಠಾಕೂರ್ ಮತ್ತು ಅಜಿಂಕ್ಯ ರಹಾನೆ ಭಾಗವಹಿಸಿ ನವ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.

ಕಳೆದ ವರ್ಷದ ಜೂನ್‌ನಲ್ಲಿ ಕರುಣ್ ನಾಯರ್ ಅವರು ತಾವು ನಿಶ್ಚಿತಾರ್ಥ ಮಾಡಿಕೊಂಡಿದ್ದ ಬಗ್ಗೆ ಬಹಿರಂಗಪಡಿಸಿದ್ದರು. ‘ಶಿ ಸೆಡ್‌ ಯೆಸ್‌’ (ಅವಳು ಸಮ್ಮತಿಸಿದಳು) ಎಂದು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದರು. ಸನಾಯಾ ಜೊತೆಗಿರುವ ಚಿತ್ರ ಮತ್ತು ವಿಡಿಯೊವನ್ನೂ ಪೋಸ್ಟ್‌ ಮಾಡಿದ್ದರು.

ಅಂದಹಾಗೆ ಟೆಸ್ಟ್ ಕ್ರಿಕೆಟ್’ನಲ್ಲಿ ವಿರೇಂದ್ರ ಸೆಹ್ವಾಗ್ ಬಳಿಕ ತ್ರಿಶತಕ ಸಿಡಿಸಿದ ಭಾರತದ ಎರಡನೇ ಕ್ರಿಕೆಟಿಗ ಎನ್ನುವ ದಾಖಲೆ ಬರೆದಿರುವ ಕರುಣ್ ನಾಯರ್, ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2016-17ರಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ 303 ರನ್ ಬಾರಿಸಿ ದಾಖಲೆ ಬರೆದಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top