fbpx
ಸಮಾಚಾರ

“ಎಷ್ಟು ದಿನ ಬದುಕಿರುತ್ತೀನೋ ಗೊತ್ತಿಲ್ಲ” ಮಾಜಿ ಡಾನ್ ಮುತ್ತಪ್ಪ ರೈ!

ಮುತ್ತಪ್ಪ ರೈ ಆರೋಗ್ಯದ ಕುರಿತು ಇತ್ತೀಚೆಗೆ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದವು. ಇದೀಗ ಮುತ್ತಪ್ಪ ರೈ ಅವರೇ ಈ ಎಲ್ಲ ಊಹಾಪೋಹಗಳೂ ಉತ್ತರ ನೀಡಿದ್ದು, ನಾನು ಕ್ಯಾನ್ಸರ್‌ ಜಯಿಸಿದ್ದೇನೆ ಎಂದು ಹೇಳಿದ್ದಾರೆ.

ರಾಮನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತ್ತಪ್ಪ ರೈ ‘ವರ್ಷದ ಹಿಂದೆ ಕುಕ್ಕೆಗೆ ಹೋಗುವ ಸಂದರ್ಭದಲ್ಲಿ ಬೆನ್ನು ನೋವು‌ ಕಾಣಿಸಿಕೊಂಡಿತು. ನಂತರದಲ್ಲಿ ಪರೀಕ್ಷೆ ಮಾಡಲಾಗಿ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ನಂತರ ದೆಹಲಿಯ ಮ್ಯಾಕ್ಸ್, ಚೆನ್ಮೈನ ಅಪೋಲೊ , ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದೆ’ ಎಂದು ಹೇಳಿದರು

‘ಶೇ 90ರಷ್ಟು ಗುಣ ಆಗಿರುವುದಾಗಿ ವೈದ್ಯರು ಹೇಳಿದರು. ಆದರೆ ನಂತರದಲ್ಲಿ ಮಿದುಳಿಗೆ‌ ಕ್ಯಾನ್ಸರ್‌ ತಗುಲಿತ್ತು. ಕೆಲವು ತಿಂಗಳಷ್ಟೇ ಬದುಕುವುದಾಗಿ ವೈದ್ಯರು ಹೇಳಿದರು. ಹೀಗಾಗಿ ಬಿಡದಿಗೆ ವಾಪಸ್ ಆಗಿದ್ದೇನೆ. ನನಗೀಗ 68 ವರ್ಷ. ಐದು ಗುಂಡು ಬಿದ್ದರೂ‌ ಬದುಕಿದವನು. ಸಾವಿಗೆ ಹೆದರುವುದಿಲ್ಲ. ವಿಲ್ ಪವರ್‌ನಿಂದ ಬದುಕುತ್ತಿದ್ದೇನೆ. ಇನ್ನೆಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ, ಆದರೆ ಬದುಕಿರುವವರೆಗೂ ಸಮಾಜ ಸೇವೆ ಮುಂದುವರಿಸುತ್ತೇನೆ’ ಎಂದು ತಿಳಿಸಿದರು.

“ವರ್ಷಕ್ಕೆ 25-30 ಕೋಟಿ ತೆರಿಗೆ ಕಟ್ಟುತ್ತಿದ್ದೇನೆ, ಆಸ್ತಿ ಕುರಿತಾಗಿ ಈಗಾಗಲೇ ವಿಲ್ ಮಾಡಿಸಿಟ್ಟಿದ್ದೀನಿ, ಮಕ್ಕಳಿಗೂ ವಿಷಯ ಹೇಳಿದ್ದೀನಿ .ಕರ್ನಾಟಕ ಅಥ್ಲೆಟಿಕ್ಸ್‌ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಿದ್ದೇನೆ’ ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top