fbpx
ಸಮಾಚಾರ

‘RRR’ ಚಿತ್ರದ ರೂಮರ್ ಬಗ್ಗೆ ಕೊನೆಗೂ ಮೌನ ಮುರಿದ ನಟ ಸುದೀಪ್!

ಕೆಲ ದಿನಗಳ ಹಿಂದೆ ಟಾಲಿವುಡ್‌ ಅಂಗಳದಿಂದ ಒಂದು ಬ್ರೇಕಿಂಗ್‌ ನ್ಯೂಸ್ ಹೊರಬಿದ್ದಿತ್ತು. ಅದೇನೆಂದರೆ, ಎಸ್‌.ಎಸ್‌. ರಾಜಮೌಳಿ ನಿರ್ದೇಶನದಲ್ಲಿ ಸಿದ್ಧವಾಗುತ್ತಿರುವ ‘ಆರ್‌ಆರ್‌ಆರ್‌’ ಸಿನಿಮಾದಲ್ಲಿ ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ನಟಿಸಲಿದ್ದಾರೆ ಎನ್ನಲಾಗಿತ್ತು. ಅದರಲ್ಲಿ ಬರುವ ಒಂದು ಇಂಪಾರ್ಟೆಂಟ್ ಪೊಲೀಸ್‌ ಅಧಿಕಾರಿ ಪಾತ್ರಕ್ಕೆ ಸುದೀಪ್‌ ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿತ್ತು. ಜನವರಿ 20ರಿಂದ ಶೂಟಿಂಗ್‌ನಲ್ಲೂ ಪಾಲ್ಗೊಳ್ಳಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ, ನಟ ‘ಕಿಚ್ಚ’ ಈ ಎಲ್ಲ ಅಂತೆ ಕಂತೆಗಳಿಗೆ ಸ್ಪಷ್ಟನೆ ನೀಡಿದ್ದಾರೆ.

 

 

”ನನಗೆ ‘ಆರ್.ಆರ್.ಆರ್’ ಚಿತ್ರದ ಬಗ್ಗೆ ಗೌರವ ಇದೆ. ಆದ್ರೆ, ಎಲ್ಲರ ಗಮನಕ್ಕೆ ನಾನು ತರಲು ಇಚ್ಛಿಸುವುದೇನೆಂದರೆ, ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಶುದ್ಧ ಸುಳ್ಳು. ‘ಆರ್.ಆರ್.ಆರ್’ ಚಿತ್ರಕ್ಕಾಗಿ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನನ್ನ ಹಾಗೂ ರಾಜಮೌಳಿ ನಡುವೆ ಮಾತುಕತೆ ನಡೆದಿಲ್ಲ” ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ತಾವು ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಂದಹಾಗೆ ಬಾಹುಬಲಿ ನಂತರ ರಾಜಮೌಳಿ ನಿರ್ದೇಶಿಸುತ್ತಿರುವ ಮತ್ತೊಂದು ಭಾರಿ ಬಜೆಟ್ ತೆಲುಗು ಸಿನಿಮಾ RRR. ಈ ಸಿನಿಮಾದಲ್ಲಿ ಜೂನಿಯರ್ ಎನ್‌ಟಿಆರ್, ರಾಮ್ ಚರಣ್ ನಾಯಕರಾಗಿ ನಟಿಸುತ್ತಿದ್ದಾರೆ. ರಾಜಮೌಳಿ ಸಿನಿಮಾದಲ್ಲಿ ಸುದೀಪ್ ಇರಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಹಿನ್ನಲೆಯಲ್ಲಿ ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top