fbpx
ಸಮಾಚಾರ

ಕನ್ನಡ ನಟ ಕಿಚ್ಚ ಸುದೀಪ್ ಮುಡಿಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ!

ಕನ್ನಡ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಸ್ಯಾಂಡಲ್ ವುಡ್ ಬಾದ್ ಷಾ ಭಾಜನರಾಗಿದ್ದಾರೆ.

 

 

ಫೆಬ್ರವರಿ 20ರಂದು ಮುಂಬೈನ ಖಾಸಗಿ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನಡೆಯಲಿರುವ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ರಾಜ್ಯಪಾಲರು ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಹಾಗೂ ಮಹಾತ್ಮ ಗಾಂಧೀಜಿಯವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಅದ್ಧೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ

ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಗೆ ಕಿಚ್ಚ ಆಯ್ಕೆಯಾಗಿರುವ ವಿಚಾರವನ್ನು ದಾದಾ ಸಾಹೇಬ್ ಫಾಲ್ಕೆಯವರ ಮೊಮ್ಮಗ ಚಂದ್ರಶೇಖರ್ ಪುಸಲ್ಕರ್ ಅವರು ಖಚಿತಪಡಿಸಿದ್ದಾರೆ. ಸದ್ಯ ಚಂದ್ರಶೇಖರ್ ಪುಸಲ್ಕರ್ ಅವರು ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ನ ಜ್ಯೂರಿ ಪ್ರೆಸಿಡೆಂಟ್ ಆಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top