fbpx
ಸಮಾಚಾರ

“ಆದಿತ್ಯ ರಾವ್ ಒಬ್ಬ ಭಯೋತ್ಪಾದಕ, ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ” ಸಚಿವ ಕೋಟ ಶ್ರೀನಿವಾಸ ಪೂಜಾರಿ

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದ ಬಾಂಬ್​ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ. ಆದಿತ್ಯ ರಾವ್ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಜಿಪಿ ನೀಲಮಣಿರಾಜು ಅವರ ಎದುರು ಬುಧವಾರ ಬೆಳಿಗ್ಗೆ ಸುಮಾರು 8.40ರ ಸುಮಾರಿಗೆ ಶರಣಾಗಿದ್ದಾನೆ.

ಈ ಮದ್ಯೆ ಆದಿತ್ಯ ರಾವ್ ಒಬ್ಬ ಭಯೋತ್ಪಾದಕನಾಗಿದ್ದು ಸರ್ಕಾರ ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಅವರು “ಆತನ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಜಾತಿ-ಧರ್ಮ ನೋಡುವುದಿಲ್ಲ. ಆತ ಒಬ್ಬ ಭಯೋತ್ಪಾದಕ” ಎಂದರು.

“ವಿಮಾನ ನಿಲ್ದಾಣದಲ್ಲಿ ಇಟ್ಟ ಬಾಂಬನ್ನು ಮಂಗಳೂರು ಪೊಲೀಸರು ಅತ್ಯಂತ ಚಾಣಕ್ಯತನಿಂದ ಭೇದಿಸಿ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ. ಇಲ್ಲದೇ ಹೋಗಿದ್ದರೆ ಸಾಕಷ್ಟು ಅನಾಹುತ ಆಗುತ್ತಿತ್ತು. ಮಂಗಳೂರಿನಲ್ಲಿ ನಡೆಯುತ್ತಿರುವ ಹಲವು ದುಷ್ಕೃತ್ಯಗಳ ಹಿಂದೆ ಹೊರ ರಾಜ್ಯಗಳ ಕೈವಾಡ ಇರುವ ಶಂಕೆ ಇದೆ. ಈ ಬಗ್ಗೆ ಪೊಲೀಸರು ಎಲ್ಲ ದೃಷ್ಟಿಕೋನದಿಂದ ತನಿಖೆ ನಡೆಸುತ್ತಿದ್ದಾರೆ” ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top