fbpx
ಸಮಾಚಾರ

ಖ್ಯಾತ​ ಹಾಸ್ಯನಟ ಸುನೀಲ್​ ಅಸ್ವಸ್ಥ, ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಆತಂಕ!

ಮರ್ಯಾದ ರಾಮನ್ನದಂತ ಸೂಪರ್ ಹಿಟ್ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದ ದಕ್ಷಿಣ ಭಾರತದ ಖ್ಯಾತ ಹಾಸ್ಯನಟ ಸುನೀಲ್ ಅನಾರೋಗ್ಯಕ್ಕೆ ತುತ್ತಾಗಿದ್ದು ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈದರಾಬಾದಿನ ಗಚ್ಚಿಬೌಲಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸುನೀಲ್​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸುನೀಲ್​ ಅವರನ್ನು ಯಾವ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿಲ್ಲ. ಈ ಬಗ್ಗೆ ಆಸ್ಪತ್ರೆಯವರಾಗಲಿ, ಕುಟುಂಬದವರಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಆದರೆ ಸುನೀಲ್​ ಅವರು ಲಿವರ್​ ಹಾಗೂ ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಪರೀಕ್ಷಿಸಿರುವ ವೈದ್ಯರು ಸುನೀಲ್ ಅವರು ಚೇತರಿಸಿಕೊಳ್ಳುತ್ತಿದ್ದು ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವುದಾಗಿ ಕುಟುಂಬಸ್ಥರು ತಿಳಿಸಿದ್ದು ಅಭಿಮಾನಿಗಳಿಗೆ ಆತಂಕ ಬೇಡ ಎಂದು ಹೇಳಿದ್ದಾರೆ.

ಅಂದಹಾಗೆ ಸುನೀಲ್​ ಅವರು ನುವ್ವು ಲೇಕ ನೇನು ಲೇನು, ಮನಸಂತಾ ನುವ್ವೆ, ತೊಲಿ ವೊಲಪು, ಪ್ರೇಮಕು ಸ್ವಾಗತಂ, ನುವ್ವೆ ನುವ್ವೆ, ಪರುಗು ಜಲ್ಸಾ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜಮೌಳಿ ನಿರ್ದೇಶನದ ‘ಮರ್ಯಾದ ರಾಮಣ್ಣ’ ಚಿತ್ರದಲ್ಲಿ ಸುನೀಲ್​ ನಾಯಕನಾಗಿ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top