fbpx
ಸಮಾಚಾರ

ಸೆಲ್ಫಿ ವಿಡಿಯೋ ಕೇಸ್: ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ನಟಿ ಸಂಜನಾ

ಬಹುಭಾಷಾ ನಟಿ ಸಂಜನಾ ಗಲ್ರಾನಿ, ಕಾರು ಚಲಾಯಿಸುತ್ತಿದ್ದಾಗ ಸೆಲ್ಫಿ ವಿಡಿಯೋ ಮಾಡಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಜನವರಿ 24ರಂದು ವಿಚಾರಣೆಗೆ ಹಾಜರಾಗುವಂತೆ ನಟಿ ಸಂಜನಾ ಅವರಿಗೆ ಬನಶಂಕರಿ ಸಂಚಾರಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಆದರೆ ಸದ್ಯ ಚಿತ್ರವೊಂದರ ಚಿತ್ರೀಕರಣದ ನಿಮಿತ್ಯ ಸಂಜನಾ ದುಬೈಗೆ ತೆರಳಿದ್ದು, ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ಮರಳಿದ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಸಂಜನಾ ಅವರ ಸೆಲ್ಫಿ ವೀಡಿಯೋ ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಂಚಾರಿ ಪೊಲೀಸರು ಈ ಬಗ್ಗೆ ಸ್ಪಷ್ಟನೆ ಕೇಳಿ ನೋಟಿಸ್ ನೀಡಿದ್ದರು. ಬೆಂಗಳೂರಿನಲ್ಲಿ ದುಬಾರಿ ಕಾರಿನಲ್ಲಿ ಸಂಚಾರ ಮಾಡುತ್ತಾ ಸಂಜನಾ ಸೆಲ್ಫಿ ವಿಡಿಯೋ ಮಾಡಿದ್ದರು. ಇದಕ್ಕೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಬಳಿಕ ಸಂಜನಾಗೆ ನೋಟಿಸ್ ನೀಡಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top