fbpx
ಸಮಾಚಾರ

ಅಂತಿಮ ಹಂತ ತಲುಪಿದ ಕೆಜಿಎಫ್ 2 ಶೂಟಿಂಗ್: ಸದ್ಯದಲ್ಲೇ ರಿಲೀಸ್ ಡೇಟ್ ಘೋಷಣೆ!

ಪ್ರಶಾಂತ್‌ ನೀಲ್ ನಿರ್ದೇಶನದ ‘ರಾಕಿಂಗ್‌ ಸ್ಟಾರ್‌’ ಯಶ್‌ ನಾಯಕನಾಗಿರುವ ‘ಕೆಜಿಎಫ್‌ ಚಾಪ್ಟರ್‌ 1’ ಕನ್ನಡ ಚಿತ್ರರಂಗದಲ್ಲಿ ಹಲವು ಮೈಲಿಗಲ್ಲುಗಳಿಗೆ ನಾಂದಿ ಹಾಡಿದ ಚಿತ್ರ. ಈಗ ಕೆಜಿಎಫ್ 2 ಸಿನಿಮಾ ಶೂಟಿಂಗ್ ಬಹುತೇಕ ಫೈನಲ ಹಂತ ತಲುಪಿದೆ. ಸದ್ಯ ಸಿನಿಮಾ ತಂಡ ಹೈದಾರಾಬಾದ್ ಮತ್ತು ಮೈಸೂರಿನನ ಕೆಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸುತ್ತಿದೆ.

ಮೈಸೂರಿನಲ್ಲಿ ಕೆಜಿಎಫ್2 ಟಾಕಿ ಪೋರ್ಸನ್ ನಡೆಯುತ್ತಿದೆ, ಯಶ್ ಮತ್ತು ಶ್ರೀನಿಧಿ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು, ಇದಾದ ನಂತರ ಹೈದರಾಬಾದ್ ನಲ್ಲಿ ಪರಮುಖ ಸನ್ನಿವೇಶಗಳನ್ನು ಚಿತ್ರೀಕರಿಸಲಾಗುತ್ತದೆ. ಬೆಂಗಳೂರು ಮತ್ತು ಕೋಲಾರದಲ್ಲಿ ಶೂಟಿಂಗ್ ನಡೆಯಲಿದೆ. ಶೂಟಿಂಗ್ ಮುಗಿದ ಕೂಡಲೇ ಚಿತ್ರ ರಿಲೀಸ್ ಡೇಟ್ ಪ್ರಕಟಿಸಲಾಗುವುದು ಎಂದು ಹೇಳಲಾಗುತ್ತಿದೆ.

ಕೆಜಿಎಫ್ ಚಾಪ್ಟರ್ 2 ನಲ್ಲಿ ಅಧೀರನ ಪಾತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಅವರು ನಟಿಸುತ್ತಿದ್ದಾರೆ. ಅಷ್ಟೇ ಅಲ್ಲ, ರವೀನಾ ಟಂಡನ್ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದು, ಅಧಿಕೃತ ಘೋಷಣೆಯೊಂದು ಪ್ರೊಡಕ್ಷನ್ ಹೌಸ್‌ನಿಂದ ಹೊರಬೀಳಬೇಕಿದೆ. 2020ರ ದ್ವಿತೀಯಾರ್ಧದಲ್ಲಿ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top