fbpx
ಸಮಾಚಾರ

KSRTC ನೇಮಕಾತಿ: 1619 ಹುದ್ದೆಗಳಿಗೆ ಅರ್ಜಿ ಅಹ್ವಾನ!

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ದರ್ಜೆ-3 ಮೇಲ್ವಿಚಾರಕೇತರ ವೃಂದದ 1619 ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

857 ಚಾಲಕ ಮತ್ತು 621 ಚಾಲಕ ಕಂ ನಿರ್ವಾಹಕ ಹುದ್ದೆಗಳು ಹಾಗೂ 68 ಹಿಂಬಾಕಿ ಚಾಲಕ ಹುದ್ದೆಗಳು, 73 ಹಿಂಬಾಕಿ ಚಾಲಕ ಕಂ ನಿರ್ವಾಹಕ ಹುದ್ದೆಗಳು ಸೇರಿ ಒಟ್ಟು 1619 ಹುದ್ದೆಗಳಿಗೆ ಆಹ್ವಾನಿಸಲಾಗಿದ್ದು, ಜನವರಿ 6 ರಿಂದ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಹತೆ:
ಚಾಲಕ ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮುಕ್ತ ವಿವಿಯಿಂದ ಪಡೆದ ಎಸ್‌ಎಸ್‌ಸಿ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.

ಇತರೆ ಅರ್ಹತೆಗಳು:
ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ (HTV) ಚಾಲನಾ ಪರವಾನಿಗೆ ಹೊಂದಿ ಕನಿಷ್ಠ 2 ವರ್ಷಗಳಾಗಿರಬೇಕು. ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್‌ವಿ ಬ್ಯಾಡ್ಜ್‌ ಹೊಂದಿರಬೇಕು.

ವಯೋಮಿತಿ:
ವಯೋಮಿತಿ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಟ 24 ರಿಂದ ಪರಿ‍ಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ, ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ವರ್ಗ-1/ಮಾಜಿ ಸೈನಿಕ/ ಆಶಕ್ತ ಮಾಜಿ ಸೈನಿಕರ ಅವಲಂಬಿತರು 300/-ರೂ

ಹೆಚ್ಚಿನ ಮಾಹಿತಿಗಾಗಿ www.nekrtcjobs.karnataka.gov.in ಅಥವಾ www.nekrtc.org/jobs ಗೆ ಭೇಟಿ ನೀಡಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top