fbpx
ಸಮಾಚಾರ

ಕಂದಾಯ ಇಲಾಖೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ

ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 69 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ 20-01-2020ರಿಂದ ಅರ್ಜಿ ಸಲ್ಲಿಸಬಹುದು, ಅರ್ಜಿಗಳನ್ನು ಸಲ್ಲಿಸಲು 21/2/2020 ಕೊನೆಯ ದಿನವಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.

ವಯೋಮಿತಿ:
ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ವಿವರ
ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100 ರೂ., ಇತರೆ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕ್‌ನಲ್ಲಿ ಪಾವತಿ ಮಾಡಲು 21/2/2020 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವಿಕೆ:
ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಅರ್ಜಿಯನ್ನು http://chitradurga-va.kar.nic.in/MainPrev.aspx ವೆಬ್‌ಸೈಟ್‌ನಲ್ಲಿ ದಿನಾಂಕ 21/2/2020ರೊಳಗೆ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳ ಇತರ ಮಾಹಿತಿಯನ್ನು ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ವೆಬ್‌ಸೈಟ್ http://chitradurga-va.kar.nic.in/MainPrev.aspxನಲ್ಲಿ ಪಡೆಯಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top