fbpx
ಸಮಾಚಾರ

“ಎಲ್ಲಾ ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳುಹಿಸಲು ಅಂಬೇಡ್ಕರ್ ಹೇಳಿದ್ದರು” ಕಲ್ಲಡ್ಕ ಪ್ರಭಾಕರ ಭಟ್

ದೇಶ ಇಬ್ಭಾಗವಾದಾಗ ಹಿಂದೂಗಳೆಲ್ಲ ಭಾರತದಲ್ಲಿರಲಿ, ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕೆಂದು ಡಾ.ಬಾಬಾಸಾಹೇಬ ಅಂಬೇಡ್ಕರ್ ಸಲಹೆ ನೀಡಿದ್ದರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ ಭಟ್ಟ ಕಲ್ಲಡ್ಕ ಹೇಳಿದ್ದಾರೆ!.

ಉಡುಪಿಯ ಕಟಪಾಡಿಯಲ್ಲಿ ಪೌರತ್ವ ಕಾಯ್ದೆಯ ಜನಜಾಗೃತಿ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, “72 ವರ್ಷದಲ್ಲಿ ಭಾರತ ದೇಶ ಭೂಮಿಯನ್ನೂ ಹಿಂದೂಗಳನ್ನು ಕಳೆದುಕೊಳ್ಳುತ್ತಿದೆ. ಅದ್ಭುತ ಹಿಂದೂ ಸಮಾಜ ಪಾತಾಳಕ್ಕೆ ಕುಸಿಯುತ್ತಿದೆ. ಪಾಕಿಸ್ತಾನ- ಬಾಂಗ್ಲಾಗಳಿಂದ 5 ಕೋಟಿಗಿಂತ ಅಧಿಕ ಸಂಖ್ಯೆಯ ಜನರು ನಮ್ಮ ದೇಶಕ್ಕೆ ಅಕ್ರಮವಾಗಿ ನುಗ್ಗಿದ್ದಾರೆ. ನಮ್ಮ ದೇಶದ ಪ್ರಜೆಗಳಿಗೆ ಪೌರತ್ವ ತಿದ್ದುಪಡಿ ಯಿಂದ ಲಾಭವೇ ಹೊರತು ಯಾವ ತೊಂದರೆ ಯೂ ಇಲ್ಲ” ಎಂದರು.

“ಅಂಬೇಡ್ಕರ್ ಒಬ್ಬರು ರಾಷ್ಟ್ರೀಯ ನಾಯಕ. ಅವರನ್ನು ಒಂದು ಜಾತಿಗೆ ಸೀಮಿತ ಮಾಡಿದ್ದು ನಮ್ಮ ದುರ್ದೈವ. ಅಂಬೇಡ್ಕರ್ ಹೇಳಿದಂತೆ ನಾವು ಅವತ್ತೇ ಮಾಡಬೇಕಿತ್ತು. ಭಾರತದ ಮುಸಲ್ಮಾನರು ಪಾಕಿಸ್ತಾನಕ್ಕೆ ಹೋಗಲಿ ಎಂದಿದ್ದ ಅಂಬೇಡ್ಕರ್ ಅವರ ಮಾತಿನಂತೆ ನಾವು ಮಾಡಬೇಕಿತ್ತು. ಅವರ ಸಲಹೆಯನ್ನು ಯಾರೂ ನಡೆಸಿಕೊಡಲಿಲ್ಲ. ಪಾಕ್‍ನ ಹಿಂದೂಗಳು ಭಾರತಕ್ಕೆ ಬರಲಿ ಎಂದು ಅವತ್ತೇ ಸಲಹೆ ಕೊಟ್ಟಿದ್ದರು” ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top