fbpx
ಸಮಾಚಾರ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!

ಕಾಂಗ್ರೆಸ್ ಅಧಿನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸ ದಿಲ್ಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ಅವರನ್ನು ದಾಖಲಿಸಲಾಗಿದೆ. ಸೋನಿಯಾ ಅವರೊಂದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕೂಡ ಆಸ್ಪತ್ರೆಯಲ್ಲಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. 2017 ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶನಿವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್​​​​ ಮಂಡನೆ ಕಲಾಪಕ್ಕೂ ಸೋನಿಯಾ ಗಾಂಧಿ ಗೈರಾಗಿದ್ದರು. ಸೋನಿಯಾರನ್ನು ಕಳೆದ ಒಂಭತ್ತು ವರ್ಷಗಳಿಂದ ಅಮೆರಿಕಾದಲ್ಲಿ ನಿಯಮಿತ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಈಗಲೂ ಸೋನಿಯಾ ಗಾಂಧಿಯವರ ಆರೋಗ್ಯದ ವಿಚಾರದಲ್ಲಿ ಯಾವುದೆ ಕಳವಳಪಡುವ ಅಗತ್ಯವಿಲ್ಲ. ಎಂದಿನಂತೆಯೇ ನಿಯಮಿತ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ತೆರಳಿದ್ಧಾರೆ ಎಂದು ವೈದ್ಯಕೀಯ ಮೂಲಗಳು ಹೇಳಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top