fbpx
ಸಮಾಚಾರ

“ಯಾರಿಗೋ ಪ್ರಧಾನಿಯಾಗುವ ಆಸೆಯಿಂದ ದೇಶ ಇಬ್ಭಾಗವಾಯ್ತು” ನೆಹರೂ ಅವರನ್ನು ತರಾಟೆಗೆ ತೆಗೆದುಕೊಂಡ ಮೋದಿ!

ಕೇವಲ ಪ್ರಧಾನಿಯಾಗುವ ತಮ್ಮ ಬಯಕೆ ಈಡೇರಿಸಿಕೊಳ್ಳಲು ದೇಶವನ್ನೇ ಇಬ್ಭಾಗ ಮಾಡಿದ ಇತಿಹಾಸ ನಮ್ಮ ಕಣ್ಣ ಮುಂದಿದೆ ಎಂದು ಪ್ರಧಾನಿ ಮೋದಿ ಪರೋಕ್ಷವಾಗಿ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ, ಯಾರೋ ಒಬ್ಬರು ಪ್ರಧಾನಿಯಾಗಬೇಕೆಂಬ ಆಸೆಯಿಂದ ಭಾರತವನ್ನು ವಿಭಜಿಸಿ ಎರಡು ದೇಶಗಳನ್ನಾಗಿ ಹೋಳು ಮಾಡಿದರು. ದೇಶ ಇಬ್ಭಾಗವಾದ ನಂತರ ಪಾಕಿಸ್ತಾನದಲ್ಲಿ ಹಿಂದೂ, ಸಿಖ್ಖರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರಿಗೆ ಯಾವ ರೀತಿ ಕಿರುಕುಳ ನೀಡಲಾಯಿತು ಎಂಬುದು ಇಡೀ ಜಗತ್ತಿಗೆ ಗೊತ್ತು ಎಂದು ಮೋದಿ ಹರಿಹಾಯ್ದರು.

1950ರಲ್ಲಿ ನೆಹರೂ-ಲಿಲಿಯಾಕತ್ ಅಲಿ ಒಪ್ಪಂದ ವೇಳೆ ಪಾಕಿಸ್ತಾನದಲ್ಲಿ ಧರ್ಮ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವುದಿಲ್ಲ ಎಂದು ಒಪ್ಪಂದವಾಗಿತ್ತು. ನೆಹರೂರಂತಹ ಜಾತ್ಯತೀತವಾದಿಗಳು ದೂರದೃಷ್ಟಿ ಹೊಂದಿದ್ದವರು ಆಗ ಏಕೆ ಎಲ್ಲಾ ನಾಗರಿಕರನ್ನು ಒಪ್ಪಂದದಲ್ಲಿ ಪರಿಗಣಿಸಿರಲಿಲ್ಲ? ಇದಕ್ಕೆ ಆಗ ಏನಾದರೊಂದು ಕಾರಣ ಇದ್ದಿರಬಹುದಲ್ಲವೇ ಎಂದು ಕೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top