fbpx
ಸಮಾಚಾರ

ವಿಜಯ್ ರಾಘವೇಂದ್ರ ಚಿತ್ರದಿಂದ ಪ್ರಜ್ವಲ್ ದೇವರಾಜ್ ಸಿನಿಮಾಗೆ ಅನ್ಯಾಯ?: ಚೇಂಬರ್ ಎದುರು ಧರಣಿ

ನಟರಾದ ಪ್ರಜ್ವಲ್ ದೇವರಾಜ್ ಮತ್ತು ವಿಜಯ್ ರಾಘವೇಂದ್ರ ನಡುವೆ ವಾರ್ ಶುರುವಾಗಿದೆ. ಅಂದರೆ ಪ್ರಜ್ವಲ್ ಅಭಿನಯದ ಜಂಟಲ್ ಮನ್ ಸಿನಿಮಾ ಮತ್ತು ವಿಜಯ್ ರಾಘವೇಂದ್ರ ಅಭಿನಯದ ಮಾಲ್ಗುಡಿ ಡೇಸ್ ಸಿನಿಮಾಗಳ ನಡುವೆ ಕಿತ್ತಾಟ ಪ್ರಾರಂಭವಾಗಿದೆ. ಏನಿದು ವಿಚಾರ ಅಂತೀರಾ? ಮುಂದೆ ಓದಿ!

ನಾಳೆ ತೆರೆಕಾಣ್ತಿರೋ ಈ 2 ಚಿತ್ರಗಳು ಮೇನ್ ಥಿಯೇಟರ್ ಸಂತೋಷ್ ಚಿತ್ರಮಂದಿರಕ್ಕಾಗಿ ಕಾಯ್ತಿವೆ. ಇದೇ ಕಾರಣಕ್ಕೆ ತಮಗೆ ಅನ್ಯಾಯವಾಗಿದೆ ಅಂತಾ ಆರೋಪಿಸಿರೋ ಜಂಟಲಮನ್ ಚಿತ್ರತಂಡ ಫಿಲ್ಮ್ ಚೇಂಬರ್ ಮುಂದೆ ಧರಣಿ ಮಾಡುತ್ತಿದೆ. ವಿತಕರ ಜಯಣ್ಣ ನಮಗೆ ಸಂತೋಷ ಥಿಯೇಟರ್ ಕೊಡ್ತೀನಿ ಅಂತ ಹೇಳಿದ್ದರು. ಈಗ ಮಾಲ್ಗುಡಿ ಡೇಸ್ ಚಿತ್ರಕ್ಕೆ ಕೊಟ್ಟಿದ್ದಾರೆ ಅಂತಾ ಜಯಣ್ಣ ವಿರುದ್ದ ನಿರ್ಮಾಪಕ ಗುರುದೇಶಪಾಂಡೆ ಬೇಸರ ವ್ಯಕ್ತಪಡಿಸಿದ್ದಾರೆ.

ಸಂತೋಷ್ ಚಿತ್ರಮಂದಿರವನ್ನು ನಿರ್ವಹಣೆ ಮಾಡುತ್ತಿದ್ದ ಜಯಣ್ಣ ಅವರೇ ಖುದ್ದಾಗಿ ನಮಗೆ ಫೆ.7ಕ್ಕೆ ಸಂತೋಷ್‌ ಚಿತ್ರಮಂದಿರ ಬಿಟ್ಟುಕೊಡುವುದಾಗಿ ಹೇಳಿದ್ದರು. ಆದರೆ, ಇದ್ದಕ್ಕಿದ್ದಂತೆ ಅದೇ ಚಿತ್ರಮಂದಿರವನ್ನು ಅದೇ ದಿನ ಬೇರೊಂದು ಚಿತ್ರಕ್ಕೆ ನೀಡಿದ್ದಾರೆ. ಇದು ಜಯಣ್ಣ ಫಿಲಮ್ಸ್‌ ನಮ್ಮ ಚಿತ್ರಕ್ಕೆ ಮಾಡಿರುವ ಮೋಸ’ ಎಂದು ಗುರುದೇಶಪಾಂಡೆ ಆರೋಪಿಸಿದ್ದಾರೆ!

ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ತಮಗೆ ಮೊದಲೇ ಮಾತು ಕೊಟ್ಟಂತೆ ಕೆ.ಜಿ. ರಸ್ತೆಯಲ್ಲಿರುವ ಸಂತೋಷ್‌ ಚಿತ್ರಮಂದಿರವನ್ನೇ ನೀಡಬೇಕು. ಇಲ್ಲವೇ ಅದೇ ರಸ್ತೆಯಲ್ಲಿ ಬೇರೊಂದು ಚಿತ್ರಮಂದಿರದ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಫೆ.6ರ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಜ್ವಲ್‌ ದೇವರಾಜ್‌, ಕನ್ನಡ ಸಂಘಟನೆಗಳು, ಅಭಿಮಾನಿಗಳ ಜತೆ ಸೇರಿ ಚಿತ್ರತಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಧರಣಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ‘ಜಂಟಲ್‌ಮನ್‌’ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಹೇಳಿದ್ದಾರೆ!

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top