fbpx
ಸಮಾಚಾರ

ಕರ್ನಾಟಕದ ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ.75ರಷ್ಟು ಮೀಸಲಾತಿ: ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎಂಬ ಕೂಗು ಪದೇ ಪದೇ ಕೇಳಿಬರುತ್ತಿರುತ್ತದೆ. ಇದೀಗ ಅದಕ್ಕೆ ಸಂಭಂದಿಸಿದಂತೆ ಸಿಹಿ ಸುದ್ದಿ ಸಿಕ್ಕಿದೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ!

ಆಂಧ್ರಪ್ರದೇಶ ಮಾದರಿಯಲ್ಲೇ ಕರ್ನಾಟಕದಲ್ಲೂ ಕನ್ನಡಿಗರಿಗೆ ಶೇ.75ರಷ್ಟು ಉದ್ಯೋಗ ನೀಡುವ ಮೀಸಲು ಮಸೂದೆ ಜಾರಿಗೆ ಸಿಎಂ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲೂ ಸ್ಥಳೀಯರಿಗೆ ಶೇ.75ರಷ್ಟು ಉದ್ಯೋಗ ಕಡ್ಡಾಯವಾಗಿ ಮೀಸಲು ಇಡಲೇಬೇಕೆಂಬ ಕಾಯ್ದೆ ಪ್ರಕ್ರಿಯೆ ಚಾಲನೆಯಲ್ಲಿದೆ.

ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ರಾಜ್ಯ ಕಾರ್ಮಿಕ ಸಚಿವ ಎಸ್​​ ಸುರೇಶ್​​ ಕುಮಾರ್​​ ಅವರು, ಈ ಕಾಯ್ದೆ ಪ್ರಕ್ರಿಯೆ ಚಾಲನೆಯಲ್ಲಿದೆ ಎಂಬುದನ್ನು ಖಾತ್ರಿ ಪಡಿಸಿದ್ದಾರೆ. “ನಾವು ಯಾರ ವಿರುದ್ಧವೂ ಈ ಕಾಯ್ದೆ ಜಾರಿ ಮಾಡುತ್ತಿಲ್ಲ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಹೆಚ್ಚು ಸಿಗಬೇಕು ಎನ್ನುವುದೇ ನಮ್ಮ ಸರ್ಕಾರದ ಆಶಯ. ಅದೇ ನಿಟ್ಟಿನಲ್ಲಿ ಸರ್ಕಾರ ಕಾಯ್ದೆ ರಚನೆಗೆ ಮಾಡುತ್ತಿದೆ. ಈ ನೆಲದ ಭಾವನೆಗಳನ್ನು ನಾವು ಸದಾ ಗೌರವಿಸುತ್ತೇವೆ. ರಾಜ್ಯದ ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡುತ್ತೇವೆ. ಮುಂದಿನ ಈ ಕಾಯ್ದೆ ಜಾರಿಯಾಗಲಿದೆ” ಎಂದು ಹೇಳಿದ್ದಾರೆ!

ಈ ಹಿಂದೆ ಅಂದ್ರ ಪ್ರದೇಶ, ತೆಲಂಗಾಣ, ಮಧ್ಯ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳ ಸರ್ಕಾರವು ಆಯಾ ರಾಜ್ಯದ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಲು ಮಸೂದೆ ಜಾರಿ ಮಾಡಲಾಗಿದೆ. ಆ ರಾಜ್ಯಗಳಂತೆ ನಮ್ಮ ಕರ್ನಾಟಕದಲ್ಲೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಆದ್ಯತೆ ಸಿಗಬೇಕು ಎಂಬುದು ಕನ್ನಡಿಗರ ಕೂಗಾಗಿತ್ತು.

ಇನ್ನು ಯಡಿಯೂರಪ್ಪ ಅವರು ಬಜೆಟ್ ಸಮಾವೇಶದಲ್ಲಿ ಅಥವಾ ನಂತರ ಉದ್ಯೋಗ ಮೀಸಲಾತಿ ಆದೇಶ ಹೊರಡಿಸುವ ಸಾಧ್ಯತೆ ಇದೆ. ಮೀಸಲಾತಿ ಆದೇಶ ಕನ್ನಡಿಗರ ನಿರುದ್ಯೋಗ ಸಮಸ್ಯೆ ದೂರ ಮಾಡುವ ಜೊತೆಗೆ ಬೆಂಗಳೂರಿನ ವಲಸೆ ಸಮಸ್ಯೆ ಬಗೆಹರಿಸುತ್ತದೆಯೇ ಕಾದು ನೋಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top