fbpx
ಸಮಾಚಾರ

ಮಕ್ಕಳಿಗಾಗಿ ವಿಶೇಷ ಬಜೆಟ್: ಹೊಸ ಸಂಪ್ರದಾಯಕ್ಕೆ ಸಿಎಂ ಯಡಿಯೂರಪ್ಪ ನಾಂದಿ

2008 ರಲ್ಲಿ ರೈತರಿಗಾಗಿ ಪ್ರತ್ಯೇಕ ರೈತ ಬಜೆಟ್ ಮಂಡಿಸಿ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದ ಸಿಎಂ ಯಡಿಯೂರಪ್ಪ, ಈ ಬಾರಿ ಮತ್ತೊಂದು ವಿಶೇಷ ಬಜೆಟ್ ಮಂಡಿಸಲು ಪ್ಲಾನ್ ಮಾಡಿಕೊಂಡಿದ್ದಾರೆ.

ಮಾರ್ಚ್ 5 ರಂದು 2020-21ನೇ ಸಾಲಿನ ಬಜೆಟನ್ನು ಯಡಿಯೂರಪ್ಪನವರು ಮಂಡಿಸಲಿದ್ದಾರೆ. ಈ ಬಾರಿ ಮಕ್ಕಳಿಗಾಗಿ ವಿಶೇಷ ಬಜೆಟ್ ಮಂಡಿಸುವ ಚಿಂತನೆಯನ್ನು ಸಿಎಂ ಮಾಡಿದ್ದು, ಇದಕ್ಕಾಗಿ ಸಿದ್ಧತೆಗಳನ್ನು ಪ್ರಾರಂಭ ಮಾಡಿದ್ದಾರೆ. ಬಜೆಟ್‍ನಲ್ಲಿ ಮಕ್ಕಳ ಅಭಿವೃದ್ಧಿ, ಸುಶಿಕ್ಷಣ, ಜನಪ್ರಿಯ ಯೋಜನೆ ಮತ್ತು ಕಾರ್ಯಕ್ರಮಗಳನ್ನ ಜಾರಿಗೆ ತರೋ ಮೂಲಕ ಮಕ್ಕಳ ಸ್ನೇಹ ಬಜೆಟ್ ಗೆ ಸಿಎಂ ನಿರ್ಧಾರ ಮಾಡಿದ್ದಾರೆ.

ಮಾರ್ಚ್ 5 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೂರ್ಣಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದು, ಈ ಬಾರಿ ಕೃಷಿ ಹಾಗೂ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಮಕ್ಕಳಿಗಾಗಿ ಬಜೆಟ್ ಮಂಡನೆ ಮಾಡ್ತಿರೋ ಹಿನ್ನೆಲೆಯಲ್ಲಿ ಸಿಎಂ ಎಲ್ಲಾ ಇಲಾಖೆಗಳಿಂದ ಮಾಹಿತಿ ಸಂಗ್ರಹ ಮಾಡ್ತಿದ್ದಾರೆ. ತಮ್ಮ ಇಲಾಖೆ ವ್ಯಾಪ್ತಿಗೆ ಬರುವ ಮಕ್ಕಳ ಕೇಂದ್ರಿತ ಯೋಜನೆ, ಕಾರ್ಯಕ್ರಮಗಳ ವಿವರ, ಅನುದಾನ ಹಂಚಿಕೆ, ಖರ್ಚು, ಕಾರ್ಯನೀತಿಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top