fbpx
ಸಮಾಚಾರ

ಫೆಬ್ರವರಿ 13ಕ್ಕೆ ಕರ್ನಾಟಕ ಬಂದ್: ವಿವಿಧ ಸಂಘಟನೆಗಳಿಂದ ಬೆಂಬಲ!

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ.13 ರಂದು ಕರ್ನಾಟಕ ಬಂದ್’ಗೆ ಕರೆ ನೀಡಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಈ ಬಂದ್’ಗೆ ಬೆಂಬಲ ನೀಡಿವೆ! ಓಲಾ, ಊಬರ್, ಟ್ಯಾಕ್ಸಿ, ಲಾರಿ ಮಾಲೀಕರ ಸಂಘ, ಕೊಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘಟನೆ, ದಲಿತ ಸಂಘಟನೆ, ವಿವಿಧ ಕಾರ್ಮಿಕ ಹಾಗೂ ಕನ್ನಡಪರ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ಸಿಕ್ಕಿದೆ.

ಸರೋಜಿನಿ ಮಹಿಷಿ ಸಮಿತಿಯ ವರದಿ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ತತ್​ಕ್ಷಣವೇ ವರದಿ ಅನುಷ್ಠಾನ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ. ಫೆಬ್ರವರಿ 13ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ರ್ಯಾಲಿ ನಡೆಸಲಾಗುವುದು. ಸರೋಜಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕಳೆದ 97 ದಿನಗಳಿಂದ ನಗರದ ಮೌರ್ಯ ವೃತ್ತದಲ್ಲಿ ಧರಣಿ ನಡೆಸಲಾಗುತ್ತದೆ!

ಏನಿದು ಸರೋಜಿನಿ ಮಹಿಷಿ ವರದಿ?
1983ರಲ್ಲಿ ಕರ್ನಾಟಕದಲ್ಲಿ ಕನ್ನಡಿಗರಿಗೆ ದೊರೆಯುತ್ತಿದ್ದ ಉದ್ಯೋಗಾವಕಾಶಗಳನ್ನು ಪರಿಶೀಲಿಸಿ ವಿಮರ್ಶಿಸಲು ಶ್ರೀಮತಿ ಸರೋಜಿನಿ ಮಹಿಷಿಯವರಿಗೆ ಕೇಳಿಕೊಂಡಿತ್ತು. ಗೋಪಾಲಕೃಷ್ಣ ಅಡಿಗ ಮೊದಲಾದ 4 ಮಂದಿ ಇದ್ದ ಈ ಸಮಿತಿ 1986ರಲ್ಲಿ ಅಂತಿಮ ವರದಿ ಸಲ್ಲಿಸಿತು. ಒಟ್ಟು 58 ಶಿಫಾರಸುಗಳನ್ನು ಮಾಡಿತು. ಇದರಲ್ಲಿ ರಾಜ್ಯ ಸರ್ಕಾರ 40 ಶಿಫಾರಸುಗಳನ್ನು ಒಪ್ಪಿಕೊಂಡಿದೆ. ಉಳಿದ ಹಲವು ಪ್ರಮುಖ ಶಿಫಾರಸುಗಳು ಇನ್ನೂ ಅನುಮೋದನೆ ಸಿಕ್ಕಿಲ್ಲ!! ಕನ್ನಡಿಗರಿಗೆ ಎಲ್ಲಿಲ್ಲಿ ಎಷ್ಟೆಷ್ಟು ಪ್ರಮಾಣದಲ್ಲಿ ಉದ್ಯೋಗಾವಕಾಶ ಇರಬೇಕೆಂದು ಈ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top