fbpx
ಸಮಾಚಾರ

ಕೆಪಿಎಸ್‌ಸಿ ನೇಮಕಾತಿ; ವಿವಿಧ ಇಲಾಖೆಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಪಡೆದಿರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. 27 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1112 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳಲ್ಲಿ 137 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಡಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 1112

ವೇತನ ಶ್ರೇಣಿ
ಸಹಾಯಕ ಹುದ್ದೆ : ರೂ.30350-58250.
ಪ್ರಥಮ ದರ್ಜೆ ಸಹಾಯಕ ಹುದ್ದೆ : ರೂ.27650-52650.

ಪರೀಕ್ಷಾ ದಿನಾಂಕಗಳು
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ : 09-05-2020
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 10-05-2020

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ‌ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.(ಸಹಾಯಕ/ ಪ್ರಥಮ ದರ್ಜೆ ಸಹಾಯಕ ಎರಡು ಹುದ್ದೆಗಳಿಗೂ)

ಅರ್ಜಿ ಶುಲ್ಕ
ಸಾಮಾನ್ಯ ವರ್ಗಕ್ಕೆ 600 ರೂ. + ಪ್ರೊಸೆಸಿಂಗ್ ಚಾರ್ಜ್ 35 ರೂ. ಶುಲ್ಕ, ಪ್ರವರ್ಗ 2(ಎ), 2 (ಬಿ), 3 (ಎ), 3(ಬಿ) ಅಭ್ಯರ್ಥಿಗಳಿಗೆ 300 ರೂ. + 35 ರೂ. ಪ್ರೊಸೆಸಿಂಗ್ ಶುಲ್ಕ, ಮಾಜಿ ಸೈನಿಕ (ಸಾಮಾನ್ಯ ಅರ್ಹತೆ ಮತ್ತು 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದವರಿಗೆ 50 ರೂ. + 35 ರೂ. ಪ್ರೊಸೆಸಿಂಗ್ ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. ಆದರೆ, ಪ್ರೊಸೆಸಿಂಗ್ ಶುಲ್ಕ 35 ರೂ. ಪಾವತಿಸಬೇಕು.

ನೇಮಕಾತಿ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರ ಮೆರಿಟ್‌ ಲಿಸ್ಟ್‌ ತಯಾರಿಸಿ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ: 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top