fbpx
ಸಮಾಚಾರ

ಮಾಜಿ ಸಚಿವ ಎಸ್.ಎ ರಾಮದಾಸ್‍ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು!

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್.ಎ. ರಾಮದಾಸ್ ಅವರಿಗೆ ಲಘು ಹೃದಯಾಘಾತವಾಗಿದ್ದು ತ​ಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ರಾಮದಾಸ್ ಅವರಿಗೆ ವೈದ್ಯರು ಯಶಸ್ವಿಯಾಗಿ ಆಪರೇಷನ್ ಮಾಡಿ ಹೃದಯಕ್ಕೆ ಸ್ಟೆಂಟ್ ಅಳವಡಿಸಿದ್ದಾರೆ. ರಾಮದಾಸ್ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು ಅವರು ಅಪಾಯದಿಂದ ಪಾರಾಗಿದ್ಧಾರೆನ್ನಲಾಗಿದೆ.

ನಿನ್ನೆ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಅವರಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಈಗ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಸ್‌.ಎ.ರಾಮದಾಸ್ ಅವರು ಮಾಜಿ ಸಚಿವರೂ ಆಗಿದ್ದು, ಈಗಿನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕೆಲವು ದಿನಗಳ ಹಿಂದೆಯಷ್ಟೇ ಇಚ್ಛೆ ವ್ಯಕ್ತಪಡಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top