fbpx
ಸಮಾಚಾರ

ಕಿವೀಸ್ ನೆಲದಲ್ಲಿ ಕನ್ನಡ ಕಲವರ: ಮೈದಾನದಲ್ಲಿ ರಾಹುಲ್ ಮತ್ತು ಮನೀಶ್ ಕನ್ನಡದಲ್ಲೇ ಮಾತು! ವಿಡಿಯೋ ವೈರಲ್.

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಕರ್ನಾಟಕದ ಕ್ರಿಕೆಟಿಗರಾದ ಕೆ.ಎಲ್. ರಾಹುಲ್-ಮನೀಶ್ ಪಾಂಡೆ ನಡುವಿನ ಜುಗಲ್‌ಬಂದಿಗೆ ಸಾಕ್ಷಿಯಾಯಿತು. ಅಲ್ಲದೇ ಬ್ಯಾಟಿಂಗ್ ನಡೆಸುವ ವೇಳೆ ಈ ಇಬ್ಬರು ಆಟಗಾರರು ಕನ್ನಡದಲ್ಲೇ ಮಾತನಾಡುವ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಹೌದು.. ಮೌಂಟ್‌ಮೌಂಗಾನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕರ್ನಾಟಕ ಮೂಲದ ಆಟಗಾರರಾದ ಮನೀಶ್ ಪಾಂಡೇ ಹಾಗೂ ಶತಕ ವೀರ ಕೆಎಲ್ ರಾಹುಲ್ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಶ್ರೇಯಶ್ ಅಯ್ಯರ್ ಔಟಾದ ಬಳಿಕ 5ನೇ ವಿಕೆಟ್ ಗೆ ಜೊತೆಯಾದ ಈ ಜೋಡಿ ಭಾರತಕ್ಕೆ ಶತಕದ ಜೊತೆಯಾಟ ನೀಡಿತು. ಈ ವೇಳೆ ಉಭಯ ಆಟಗಾರರು ಕನ್ನಡದಲ್ಲೇ ಮಾತನಾಡಿಕೊಂಡ ವಿಚಾರ ಸ್ಟಂಪ್ ಮೈಕ್ ನಲ್ಲಿ ದಾಖಲಾಗಿದೆ.

 

 

ಶ್ರೇಯಸ್ ಅಯ್ಯರ್ ವಿಕೆಟ್ ಪತನದ ಬಳಿಕ 5ನೇ ವಿಕೆಟ್‌ಗೆ ಕೆ.ಎಲ್ ರಾಹುಲ್ ಕೂಡಿಕೊಂಡ ಮನೀಶ್ ಪಾಂಡೆ 107 ರನ್‌ಗಳ ಜತೆಯಾಟ ನಿಭಾಯಿಸಿದರು. ಈ ಮೂಲಕ ತಂಡದ ಮೊತ್ತವನ್ನು 260ರ ಗಡಿ ದಾಟಿಸಿದರು. ರನ್ ಗಳಿಸುವ ವೇಳೆ ಈ ಜೋಡಿ ಕನ್ನಡದಲ್ಲೇ ಮಾತನಾಡಿದ ಕ್ಷಣಗಳು ಸ್ಟಂಪ್ಸ್ ಮೈಕ್‌ನಲ್ಲಿ ದಾಖಲಾಗಿದೆ. ಈ ಕ್ಷಣಗಳು ಕನ್ನಡದ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದೆ.

‘ಬೇಡ ಬೇಡ, ಓಡು ಮಗ’:
ಮನೀಶ್ ಪಾಂಡೆ ಚೆಂಡನ್ನು ತಳ್ಳಿ ಒಂಟಿ ರನ್‌ಗೆ ಓಡಲು ಮುಂದಾಗುತ್ತಾರೆ. ಈ ವೇಳೆ ನಾನ್ ಸ್ಟ್ರೈಕ್‌ನಲ್ಲಿದ್ದ ಕೆ.ಎಲ್ ರಾಹುಲ್‌ ಮನೀಶ್ ಪಾಂಡೆಗೆ ‘ಬೇಡ ಬೇಡ’ ಎಂದು ಜೋರಾಗಿ ಕೂಗಿ ಹೇಳುತ್ತಾರೆ. ಇನ್ನೊಮ್ಮೆ ಚೆಂಡನ್ನು ಬಾರಿಸಿದ ತಕ್ಷಣ ಮನೀಶ್ ಪಾಂಡೆ ‘ಓಡು ಓಡು’ ಎಂದು ರಾಹುಲ್ ಗೆ ಹೇಳುತ್ತಾರೆ! ಹಾಗೆಯೆ ರಾಹುಲ್ ಮತ್ತು ಮನೀಶ್ ಬ್ಯಾಟಿಂಗ್ ನಡೆಸಿದ ಅಷ್ಟು ಹೊತ್ತು ‘ಓಡು, ಬಾ ಮಗ, ಸಿಂಪಲ್ ಆಗಿ ಹಾಕ್ತಾನೆ’ ಎಂಬ ಕನ್ನಡ ಪದಗಳು ಕೇಳುತ್ತಿದ್ದವು! ಇದು ಸ್ಟಂಪ್ ಮೈಕ್‌ನಲ್ಲಿ ದಾಖಲಾಗಿ ಕನ್ನಡಿಗರ ಮುಖದಲ್ಲಿ ಮಂದಹಾಸ ಮೂಡಿಸಿದೆ.

 

 

ಈ ಹಿಂದೆಯೇ ಕೂಡ ಮನೀಶ್ ಪಾಂಡೆ ಮೈದಾನದಲ್ಲಿ ಕನ್ನಡದಲ್ಲಿ ಮಾತನಾಡಿ ಸುದ್ದಿಯಾಗಿದ್ದರು. ಐಪಿಎಲ್ ಪಂದ್ಯಾವಳಿಯಲ್ಲಿ ಮನೀಶ್ ಪಾಂಡೇ ರಾಬಿನ್ ಉತ್ತಪ್ಪರೊಂದಿಗೆ ಪರಸ್ಪರ ಮಾತುಕತೆ ನಡೆಸಿದ್ದರು. ಈ ವೇಳೆ ವೀಕ್ಷಕ ವಿವರಣೆದಾರರೂ ಕೂಡ ಅದು ಕನ್ನಡ ಭಾಷೆಯಲ್ಲವೇ ಎಂದು ಪ್ರಶ್ನಿಸಿದ್ದಾಗ ಪಾಂಡೇ ಹೌದು ಅದು ಕನ್ನಡ ಎಂದು ಉತ್ತರಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top