fbpx
ಸಮಾಚಾರ

ಅಂಧ ಸಹೋದರಿಯರಿಗೆ ಸಹಾಯ ಹಸ್ತ ಚಾಚಿದ ನಟ ಜಗ್ಗೇಶ್: ಮನೆ ಕಟ್ಟಿಕೊಡಲು ನಿರ್ಧಾರ!

ಅಂಧ ಸಹೋದರಿಯರ ಕಷ್ಟವನ್ನು ಆಲಿಸಿದ ನವರಸ ನಾಯಕ ಜಗ್ಗೇಶ್ ಅವರ ಬಡ ಕುಟುಂಬಕ್ಕೆ ಸಹಾಯದ ಹಸ್ತವನ್ನು ಚಾಚಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಪಮ ಶೋಗೆ ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಹೋದರಿಯರು ಬಂದಿದ್ದರು. ಈ ವೇಳೆ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಇದೀಗ ಈ ಅಂಧ ಸಹೋದರಿಯರ ಬದುಕಿಗೆ ನವರಸ ಜಗ್ಗೇಶ್ ಬೆಳಕಾಗಿದ್ದಾರೆ.

 

 

ಇವರ ಕಥೆ ಕೇಳಿದ ಪ್ರತಿಯೊಬ್ಬರ ಕಣ್ಣಾಲಿಗಳನ್ನು ಒದ್ದೆ ಮಾಡಿದ್ದವು. ಅಲ್ಲದೆ ಈ ಸಹೋದರಿಯರ ಕಷ್ಟ ಕಾರ್ಪಣ್ಯಗಳನ್ನು ಸ್ಥಿತಿ ವಿಟಿ ನೋಡಿ ಮರುಗಿದ್ದರು. ಮಧುರ ಕಂಠದೊಂದಿಗೆ ಕೇಳುಗರನ್ನು ಮೋಡಿ ಮಾಡಿದ್ದ ಈ ಜೋಡಿ, ಆ ಬಳಿಕ ತಮ್ಮ ದಹನೀಯ ಸ್ಥಿತಿಯ ಬಗ್ಗೆ ಹೇಳಿಕೊಂಡಿದ್ದರು. ಈ ವಿಡಿಯೋ ಇದೀಗ ನವರಸ ನಾಯಕನ ತನಕ ಮುಟ್ಟಿದೆ. ಸಹೋದರಿಯರ ಕಷ್ಟವನ್ನು ತಿಳಿದ ಜಗ್ಗೇಶ್ ಅವರು ಬಡ ಕುಟುಂಬದ ಸಹಾಯಕ್ಕೆ ಮುಂದಾಗಿದ್ದಾರೆ.

ಸಹೋದರಿಯರು ಸಣ್ಣ ಗುಡಿಸಲಿನಲ್ಲಿ ವಾಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಮನೆ ಕಟ್ಟಿಕೊಡುವುದಾಗಿ ನಟ ಜಗ್ಗೇಶ್​ ಇನ್​ಸ್ಟಾಗ್ರಾಮ್​ನಲ್ಲಿ ಭರವಸೆ ನೀಡಿದ್ದಾರೆ. “ದೇವರ ಮಕ್ಕಳ ಸ್ಥಿತಿಕಂಡು ಭಾವುಕನಾದೆ. ತಡಮಾಡದೆ ಇವರಿಗೆ ಸೂರು ಕಲ್ಪಿಸಿಕೊಡುವಂತೆ ರಾಯರ ಪ್ರೇರಣೆಯಾಯಿತು. ಆ ಕಾರ್ಯಕ್ಕೆ ಶಿರಬಾಗಿ ಮಾಡಿಕೊಡಲು ಕೊರಟಗೆರೆ ಜಗ್ಗೇಶ್ ಅಭಿಮಾನಿಗಳ ಸಂಘದ ಫ್ರೆಂಡ್ಸ್ ಗ್ರೂಪ್‍ಗೆ ಜವಾಬ್ಧಾರಿ ನೀಡಿರುವೆ. ಈ ಕಲಾವಿದರ ಕೂಗು ರಾಯರ ಮಡಿಲು ಸೇರಿತು” ಎಂದು ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top