fbpx
ಸಮಾಚಾರ

ನಲಪಾಡ್ ಪಾಲಿಗೆ ಸಿದ್ದರಾಮಯ್ಯ ವಿಲನ್!

ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದ ಮೊಹಮ್ಮದ್ ನಲಪಾಡ್ ಇತ್ತೀಚಿನ ದಿನಗಳಲ್ಲಿ ರಾಜಕಾರಣಕ್ಕೆ ಬರುವ ಪ್ರಯತ್ನ ಮಾಡಿದ್ದರು. ಈ ಸಂದರ್ಭದಲ್ಲಿ ನಲಪಾಡ್ ಕಾರ್ ಅಪಘಾತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ.

ಭಾನುವಾರ ಮೇಖ್ರಿ ಸರ್ಕಲ್ ಅಂಡರ್ ಪಾಸ್‍ನಲ್ಲಿ ಸರಣಿ ಅಪಘಾತ ಮಾಡಿ ಲ್ಯಾಂಬೋರ್ಗಿನಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತೊಂದು ಇಕ್ಕಟ್ಟಿಗೆ ಸಿಲುಕಿದ್ದಾರೆ. ಅವರ ಕಾರು ಅಪಘಾತಕ್ಕೆ ಈಡಾಗಿದ್ದು, ಅಪಘಾತದಲ್ಲಿ ಸಿಲುಕಿದ ವ್ಯಕ್ತಿಯೋರ್ವನಿಗೆ ತೀವ್ರ ಗಾಯಗಳಾಗಿದೆ. ಅಪಘಾತದ ಸಂದರ್ಭದಲ್ಲಿ ಮೊಹಮ್ಮದ್ ನಲಪಾಡ್ ಅವರೇ ಕಾರು ಚಾಲನೆ ಮಾಡುತ್ತಿದ್ದರು ಎಂಬುದು ಪೊಲೀಸರ ಆರೋಪ ಈ ನಿಟ್ಟಿನಲ್ಲಿ ತನಿಖೆ ಆರಂಭವಾಗಿದೆ.

ಈ ಮದ್ಯೆ ಪದೇ ಪದೇ ವಿವಾದಕ್ಕೊಳಗಾಗುವ ನಲಪಾಡ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿಲನ್ ಆಗಿ ಪರಿಣಮಿಸಲಿದ್ದಾರೆ! ಸದ್ಯದಲ್ಲೇ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದ್ದು ಈ ಬಾರಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಬಣದಿಂದ ಮೊಹಮ್ಮದ್ ನಲಪಾಡ್ ಆಕಾಂಕ್ಷಿಯಾಗಿದ್ದರು. ಈ ಹಿಂದೆ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಲಪಾಡ್‍ನನ್ನು ಯುವ ಕಾಂಗ್ರೆಸ್ಸಿನಿಂದ ವಜಾ ಮಾಡಲಾಗಿತ್ತು. ನಲಪಾಡ್ ಜೈಲಿನಿಂದ ಹೊರ ಬರುತ್ತಿದ್ದಂತೆ ಅಷ್ಟೇ ವೇಗವಾಗಿ ಆತನನ್ನ ಯವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಅದೇ ನಲಪಾಡ್‍ನನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ಮಾಡಲು ಸಿದ್ದರಾಮಯ್ಯ ಬಣ ಸಿದ್ಧತೆ ನಡೆಸಿತ್ತು!

ಆದರೆ ತಮ್ಮ ಬಣದಿಂದ ಯುವ ಕಾಂಗ್ರೆಸ್ ಅಧ್ಯಕ್ಷನನ್ನಾಗಿಸುವುದು ಇರಲಿ ಜೈಲಿಗೆ ಹೋಗಿ ಬಂದಿದ್ದರು ನಲಪಾಡ್ ಇನ್ನೂ ತನ್ನ ಬುದ್ದಿಯನ್ನು ಸರಿ ಮಾಡಿಕೊಂಡಿಲ್ಲ ಎಂಬುದನ್ನ ಅರ್ಥ ಮಾಡಿಕೊಂಡ ಸಿದ್ದರಾಮಯ್ಯ ನಲಪಾಡ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಮಾಡಲು ಹಿಂಜರಿದಿದ್ದಾರೆ ಎನ್ನಲಾಗಿದೆ! ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷ ಆಗ್ತಾನೋ ಇಲ್ಲವೋ..? ಆದರೆ ಆತನ ಕಿರಿಕ್‍ಗಳು ಸ್ವತಃ ಸಿದ್ದರಾಮಯ್ಯಗೆ ಇದು ಸರಿಯಲ್ಲ ಅನ್ನಿಸಿದೆ ಎಂದು ಹೇಳಲಾಗುತ್ತಿದೆ!

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top