fbpx
ಸಮಾಚಾರ

ದರ್ಶನ್ ಬರ್ತಡೇ ಕಿರಿಕ್ ವಿವಾದ: ಎಫ್ಐಆರ್ ದಾಖಲು!

ಪ್ರತಿ ವರ್ಷ ಕೂಡ ದರ್ಶನ್ ಜನ್ಮದಿನದಂದು, ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸಕ್ಕೆ ಜನಸಾಗರವೇ ಹರಿದು ಬರುತ್ತದೆ. ಅದರಂತೆ ನಿನ್ನೆ (ಫೆಬ್ರವರಿ 16) ಕೂಡ ‘ಚಕ್ರವರ್ತಿ’ಯ ಬರ್ತಡೇ ಪ್ರಯುಕ್ತ ದರ್ಶನ್ ನಿವಾಸದ ಮುಂದೆ ಅಭಿಮಾನಿಗಳು ಸಾಗರೋಪಾದಿಯಲ್ಲಿ ಬಂದಿದ್ದರು! ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಕಾನ್‌ಸ್ಟೇಬಲ್‌ ಮೇಲೆ ದರ್ಶನ್‌ ಅಭಿಮಾನಿ ಎನ್ನಲಾದವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

“ಜ್ಞಾನಭಾರತಿ ಠಾಣೆ ಕಾನ್‌ಸ್ಟೇಬಲ್‌ ದೇವರಾಜ್‌ ಹಲ್ಲೆಗೊಳಗಾಗಿದ್ದು, ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ದರ್ಶನ್‌ ಹುಟ್ಟುಹಬ್ಬ ಕಾರ್ಯಕ್ರಮ ಆಯೋಜಿಸಿದ್ದ ವ್ಯವಸ್ಥಾಪಕರು ಹಾಗೂ ಅಪರಿಚಿತ ಅಭಿಮಾನಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅವರೆಲ್ಲರ ವಿರುದ್ಧ, ಅಪರಾಧ ಸಂಚು (ಐಪಿಸಿ 34) ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ (ಐಪಿಸಿ 353) ಆರೋಪದಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

‘ಐಡಿಯಲ್ ಹೋಮ್ ಲೇಔಟ್‌ನಲ್ಲಿರುವ ದರ್ಶನ್ ಮನೆ ಎದುರು ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿಯ ಭದ್ರತೆಗಾಗಿ ದೇವರಾಜ್ ಅವರನ್ನು ನಿಯೋಜಿಸಲಾಗಿತ್ತು. ಕಾರ್ಯಕ್ರಮ ಸ್ಥಳದಲ್ಲಿ ಅಭಿಮಾನಿಗಳು ಸರದಿಯಲ್ಲಿ ಹೋಗಲು ಆಯೋಜಕರು ಸೂಕ್ತ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ, ನೂಕುನುಗ್ಗಲು ಉಂಟಾಗಿತ್ತು. ನೂಕುನುಗ್ಗಲು ನಿಯಂತ್ರಿಸುವ ಕೆಲಸದಲ್ಲಿ ದೇವರಾಜ್ ನಿರತರಾಗಿದ್ದರು. ಅದೇ ಸಂದರ್ಭದಲ್ಲಿ ಅವರ ಮೂಗಿಗೆ ಅಭಿಮಾನಿಯೊಬ್ಬರು ಪಂಚ್‌ ಮಾಡಿದ್ದರು. ಕಣ್ಣಿಗೂ ತೀವ್ರ ಹಾನಿ ಆಗಿ ರಕ್ತ ಸೋರುತ್ತಿತ್ತು. ಸಹೋದ್ಯೋಗಿಗಳೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು’ ಎಂದು ಪೊಲೀಸರು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top