fbpx
ಸಮಾಚಾರ

ಚಿಕಿತ್ಸೆಗೆ ಹಣವಿಲ್ಲದೆ ಸಾವು ಬದುಕಿನ ನಡುವೆ ಕನ್ನಡದ ಖ್ಯಾತ ನಟ! 250 ಚಿತ್ರಗಳಲ್ಲಿ ನಟಿಸಿದ ಕಲಾವಿದನಿಗೆ ಕಿಡ್ನಿ ವೈಫಲ್ಯ

ಕನ್ನಡದಲ್ಲಿ ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಕಿಲ್ಲರ್ ಮಂಜು ಈಗ ಆರೋಗ್ಯ ಕೆಟ್ಟು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.. ಆದರೆ ಆಸ್ಪತ್ರೆಗೆ ಹಣ ಕಟ್ಟಲು ಕೂಡ ಒದ್ದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ..‌ ಈ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡುವ ಮೂಲಕ ಬೇಸರವ್ಯಕ್ತಪಡಿಸಿದ್ದಾರೆ.

“250 ಕನ್ನಡ ಚಿತ್ರ ನಟಿಸಿದ ಮಿತ್ರ ಕಿಲ್ಲರ್ ವೆಂಕಟೇಶ್. ಇಂದು ಲಿವರ್ ವೈಫಲ್ಯದಿಂದ ಸಾವು ಬದುಕಿನ ಹೋರಾಟ ಮಾಡುತ್ತಿದ್ದಾನೆ. ಇವನ ವಿಷಯವೇ ನಾನು ಚಂದನವನ ಅವಾರ್ಡ್ ವೇದಿಕೆಯಲ್ಲಿ ಮಾತಾಡಿದ್ದು. ನನ್ನ ಕೈಲಾದ ಸಹಾಯ ಮಾಡಿ ಇವನ ಉಳಿಸಿಕೊಳ್ಳಲು ಯತ್ನಿಸುತಿರುವೆ. ತುಂಬಾ ದುಃಖವಾಯಿತು ಹಿರಿಯ ಕಲಾವಿದರ ಸ್ಥಿತಿ ಕಂಡು. ರಾಯರೆ ಕಾಪಾಡಬೇಕು ಇಂಥ ಕಲಾವಿದರ..ಹರಿ ಓಂ” ಎಂದು ಜಗ್ಗೇಶ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಜಗ್ಗೇಶ್, ಕಿಲ್ಲರ್ ವೆಂಕಟೇಶ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಸದ್ಯಕ್ಕೆ ಕಿಲ್ಲರ್ ವೆಂಕಟೇಶ್ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ. ಜೊತೆಗೆ ಚಿಕಿತ್ಸೆಗೆ ಹಣದ ಅವಶ್ಯಕತೆ ಕೂಡ ಇದೆ. ಹೀಗಾಗಿ ಕುಟುಂಬದವರು ಆಸ್ಪತ್ರೆಗೆ ಹಣ ಕಟ್ಟಲು ಪರಾಡುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top