fbpx
ಸಮಾಚಾರ

ಕರ್ನಾಟಕ ಪೊಲೀಸ್ ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 54 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು 18/3/2020ರ ಸಂಜೆ 6ಗಂಟೆಯ ತನಕ ಸಲ್ಲಿಸಬಹುದಾಗಿದೆ. ಪೊಲೀಸ್ ಇಲಾಖೆಯು ಬೆಂಗಳೂರಿನ ನ್ಯಾಯ ವಿಜ್ಞಾನ ಪ್ರಾಯೋಗಾಲಯ, ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಾಯೋಗಾಲಯದ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಗೆ ಮೂಲಕ ಭರ್ತಿ ಮಾಡುತ್ತಿದೆ.

ಹುದ್ದೆ ಹೆಸರು:
ವೈಜ್ಞಾನಿಕ ಅಧಿಕಾರಿಗಳು (Scientific Officer)

ವಿದ್ಯಾರ್ಹತೆ:
ವಿಜ್ಞಾನ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಹುದ್ದೆಗಳ ಅನುಸಾರದ ವಿದ್ಯಾರ್ಹತೆ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಕ್ಲಿಕ್ಕಿಸಿ ನೋಡಬಹುದು.

ವಯಸ್ಸು:
ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷಗಳು.

ವಯೋಮಿತಿ:
ಸರ್ಕಾರಿ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ
*ಸಾಮಾನ್ಯ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ₹250
*ಪ.ಜಾ / ಪ.ಪಂಗಡ / ಪ್ರವರ್ಗ-1 ರ ಅಭ್ಯರ್ಥಿಗಳಿಗೆ: ₹100

ಪ್ರತಿ ಹುದ್ದೆಗೆ ಪ್ರತ್ಯೇಕವಾದ ವಿದ್ಯಾರ್ಹತೆ ಇದ್ದು ಅಭ್ಯರ್ಥಿಗಳು www.ksp.gov.inನಲ್ಲಿ ವಿವರಗಳನ್ನು ನೋಡಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೀಡಿರುವ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top