fbpx
ಸಮಾಚಾರ

ಡೊನಾಲ್ಡ್ ಟ್ರಂಪ್ ಭೇಟಿಯಾದ ಸಿಎಂ ಯಡಿಯೂರಪ್ಪ: ಟ್ರಂಪ್ ಕೈಕುಲುಕಿ, ಔತಣಕೂಟದಲ್ಲಿ ಭಾಗಿ!

2 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಔತಣಕೂಟ ಏರ್ಪಡಿಸಿದ್ದರು. ರಾಷ್ಟ್ರಪತಿಗಳ ಆಹ್ವಾನದ ಮೇಲೆಗೆ ರಾಜಧಾನಿ ದೆಹಲಿಗೆ ಏಕಾಂಗಿಯಾಗಿ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಅವರು, ಟ್ರಂಪ್ ಅವರಿಗೆ ಹಸ್ತಲಾಘವ ಮಾಡಿದರು.

 

 

ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಔತಣಕೂಟದಲ್ಲಿ ಭಾಗಿಯಾಗಿದ್ದಾರೆ. ಟ್ರಂಪ್​ ದಂಪತಿ ಔತಣಕೂಟದಲ್ಲಿ ಭಾಗಿಯಾಗಿರುವ ಗಣ್ಯರೊಂದಿಗೆ ಹಸ್ತಲಾಘವ ಮಾಡುವುದರೊಂದಿಗೆ ಖುದ್ದಾಗಿ ಪರಿಚಯಿಸಿಕೊಂಡಿದ್ದು ವಿಶೇಷವಾಗಿತ್ತು.

ಅಂದಹಾಗೆ ಕಳೆದ ತಿಂಗಳು ಸ್ವಿಟ್ಜರ್ಲ್ಯಾಂಡ್‌ನಲ್ಲಿ ಆಯೋಜಿಸಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲೂ ಯಡಿಯೂರಪ್ಪ ಟ್ರಂಪ್ ಮುಖಾಮುಖಿಯಾಗಿದ್ದರು. ಆದರೆ, ಪರಸ್ಪರ ಭೇಟಿಯಾಗುವ ಅವಕಾಶ ಸಿಕ್ಕಿರಲಿಲ್ಲ. ಟ್ರಂಪ್ ಭಾಷಣ ಮಾತ್ರ ಯಡಿಯೂರಪ್ಪ ಕೇಳಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top