fbpx
ಸಮಾಚಾರ

ಖ್ಯಾತ ಕನ್ನಡ ಕಿರುತೆರೆ ನಿರೂಪಕ ಗಜಾನನ ಹೆಗಡೆ ನಿಧನ!

ಖ್ಯಾತ ಕನ್ನಡ ನಿರೂಪಕ ಗಜಾನನ ಹೆಗಡೆ ನಿಧನರಾಗಿದ್ದಾರೆ. ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆಯ ತಪ್ಪಿ ಬಿದ್ದು ತಲೆಗೆ ಪೆಟ್ಟಾಗಿದ್ದ ಗಜಾನನ ಹೆಗಡೆ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಈ ಟಿವಿ ನ್ಯೂಸ್ ಮೂಲಕ ಮಾಧ್ಯಮ ರಂಗಕ್ಕೆ ಕಾಲಿಟ್ಟವರು ಕಸ್ತೂರಿ ಮತ್ತು ಪ್ರಜಾ ಟಿವಿಯಲ್ಲಿ ಕೆಲಸ ಮಾಡಿದ್ದರು. ಬಹುಮುಖ ಪ್ರತಿಭೆ ಗಜಾನನ ಹೆಗಡೆ ಅನೇಕ ಜನರನ್ನು ತಮ್ಮ ಗರಡಿಯಲ್ಲಿ ಬೆಳೆಸಿದ್ದರು. ಕಳೆದ ಒಂದು ವರ್ಷದಿಂದ ಮಾಧ್ಯಮ ಕ್ಷೇತ್ರದಿಂದ ದೂರವಾಗಿ ಸಂಗೀತ ಮತ್ತು ನಾಟಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಉತ್ತರಕನ್ನಡ ಜಿಲ್ಲೆಯ ಗಜಾನನ ಅವರು ನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿ ವಾಸವಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ‘ಫೆ. 23ರಂದು ರಾತ್ರಿ ಪರಿಚಯಸ್ಥರ ಜೊತೆ ಹೊರಟಿದ್ದ ಗಜಾನನ ಏಕಾಏಕಿ ಕುಸಿದು ಬಿದ್ದಿದ್ದರು. ಅವರನ್ನು ಟಿ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top