fbpx
ಸಮಾಚಾರ

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅವರಿಗೆ ಬುಧವಾರ ಮಧ್ಯರಾತ್ರಿ ಹೃದಯಾಘಾತ ಸಂಭವಿಸಿದೆ. ಹೌದು ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಹಿಟ್​ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಮ್ಯಾಜಿಕ್​ ಸಂಗೀತ ನಿರ್ದೇಶಕ​ ಅರ್ಜುನ್ ಜನ್ಯ ಅವರು ಲಘು ಹೃದಯಾಘಾತದಿಂದಾಗಿ ಆಸ್ಪತ್ರೆ ಪಾಲಾಗಿದ್ದಾರೆ.

ಅರ್ಜುನ್​ ಜನ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತಕ್ಕೊಳಗಾಗಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಸಮೀಪದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಈವರೆಗೂ ಆಸ್ಪತ್ರೆಯಿಂದ ಅಧಿಕೃತ ವರದಿ ಬಹಿರಂಗ ಆಗಿಲ್ಲ.

ಜನ್ಯಾಗೆ ಆಂಜಿಯೋಪ್ಲ್ಯಾಸ್ಟಿ ಹಾಗೂ ಆಂಜಿಯೋಗ್ರಾಂ ಚಿಕಿತ್ಸೆ ನೀಡಲಾಗಿದ್ದು, ಅವರು ಈ ಎರಡೂ ಎರಡು ಚಿಕಿತ್ಸೆಗೆ ಸ್ಪಂದಿಸಿದ್ದಾರೆನ್ನಲಾಗಿದೆ. ಸದ್ಯ ಅರ್ಜುನ್ ಜನ್ಯ ಆರೋಗ್ಯ ಸ್ಥಿರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಇನ್ನು 10 ಗಂಟೆಗೆ ಅಪೋಲೋ ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.

39 ವರ್ಷದ ಅರ್ಜುನ್‌ ಜನ್ಯ ಹಲವು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಜೊತೆಗೆ ರಿಯಾಲಿಟಿ ಶೋಗಳಲ್ಲೂ ಜಡ್ಜ್‌ ಆಗಿ ಭಾಗವಹಿಸುತ್ತಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top