fbpx
ಸಮಾಚಾರ

LICಯಲ್ಲಿ ನೇಮಕಾತಿ: 218 ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಜೀವ ವಿಮಾ ನಿಗಮ(ಎಲ್ಐಸಿ)ಯಲ್ಲಿ 2020ನೇ ಸಾಲಿನ ನೇಮಕಾತಿ ನಡೆಸಲಾಗುತ್ತಿದೆ. ಸುಮಾರು 218 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಹಾಯಕ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಆಭ್ಯರ್ಥಿಗಳು ಮಾರ್ಚ್ 15ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ:
ಹುದ್ದೆಗಳಿಗೆ ಸಂಬಂಧಿಸಿದಂತೆ ಆಯಾ ವಿಭಾಗದಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್‌ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.

ವೇತನ ಶ್ರೇಣಿ:
₹32,795/-(ಮೂಲ ವೇತನ)ರಿಂದ ₹62,650 ( ಇತರೆ ಭತ್ಯೆಗಳು ಸೇರಿ ಮಾಸಿಕ ₹57,000 ವೇತನ ಪಡೆಯಬಹುದು)

ವಯಸ್ಸು:
ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಸರ್ಕಾರಿ ನಿಯಮದ ಪ್ರಕಾರ ಅನ್ವಯವಾಗಲಿದೆ.

ಅರ್ಜಿ ಶುಲ್ಕ
– ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.700.
– ಎಸ್‌ಸಿ / ಎಸ್‌ಟಿ / ಅಂಗವಿಕಲ ಅಭ್ಯರ್ಥಿಗಳಿಗೆ ರೂ.85.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top