fbpx
ಸಮಾಚಾರ

ನಿಖಿಲ್ ಮದುವೆಗೂ ಮೊದಲೇ ರಾಮನಗರ, ಚನ್ನಪಟ್ಟಣ ಜನರಿಗೆ HDKಯಿಂದ ಭರ್ಜರಿ ಗಿಫ್ಟ್

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆಗೆ ಭರ್ಜರಿ ತಯಾರಿ ನಡೆಯುತ್ತದೆ. ಏಪ್ರಿಲ್‍ 17ರಂದು ನಡೆಯಲಿರುವ ನಿಖಿಲ್, ರೇವತಿ ಅವರ ಮದುವೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಎರಡೂ ಕುಟುಂಬದಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಮಧ್ಯದಲ್ಲಿ ಪುತ್ರನ ವಿವಾಹ ಮಾಡುವ ಮೂಲಕ ಎರಡೂ ಕ್ಷೇತ್ರಗಳ ಜನರನ್ನು ಭಾವನಾತ್ಮಕವಾಗಿ ಸೆಳೆಯಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.

ತಮ್ಮ ಮಗನ ಮದುವೆ ಸಂಭ್ರಮವನ್ನು ತಮ್ಮ ಕುಟುಂಬಕ್ಕೆ ಮಾತ್ರ ಸೀಮಿತಗೊಳಿಸದೆ, ತಮ್ಮ ಪಕ್ಷದ ಬೆಂಬಲಿಗರು, ಅಭಿಮಾನಿಗಳ ಜೊತೆ ಕೂಡ ಸಂಭ್ರಮಿಸಲು ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಮಗನ ಮದುವೆಗೂ ಮುನ್ನವೇ ರಾಮನಗರ ಮತ್ತು ಚನ್ನಪಟ್ಟಣದ ಜನರಿಗೆ ಭರ್ಜರಿ ಉಡುಗೊರೆ ನೀಡಲು ಮುಂದಾಗಿದ್ದಾರೆ

ರಾಜಕೀಯವಾಗಿ ಮಾತ್ರವಲ್ಲದೇ ಭಾವನಾತ್ಮಕವಾಗಿ ರಾಮನಗರ ಹಾಗೂ ಚನ್ನಪಟ್ಟಣದ ಜನತೆಯೊಂದಿಗೆ ನಂಟು ಹೊಂದಿರುವ ಕುಮಾರಸ್ವಾಮಿ ಕುಟುಂಬ ಪ್ರತೀ ಮನೆಗೂ ಆಮಂತ್ರಣ ಪತ್ರಿಕೆ ಜೊತೆ ಸೀರೆ, ಶರ್ಟ್‌ ಹಾಗೂ ಪಂಚೆಯನ್ನು ನೀಡಲಾಗುತ್ತದೆ ಎನ್ನಲಾಗಿದೆ. ರಾಮನಗರದಲ್ಲಿ ಸುಮಾರು 68 ಸಾವಿರ ಕುಟುಂಬ ಹಾಗೂ ಚನ್ನಪಟ್ಟಣದ ಸುಮಾರು 72 ಸಾವಿರ ಕುಟುಂಬಗಳಿಗೆ ಆಮಂತ್ರಣ ಪತ್ರಿಕೆ ಜೊತೆ ಸಂಪ್ರದಾಯದಂತೆ ಗಂಡಸರಿಗೆ ಪಂಚೆ, ಹೆಂಗಸರಿಗೆ ರೇಷ್ಮೆ ಸೀರೆ ನೀಡಲು ಅವರು ಮುಂದಾಗಿದ್ದಾರೆ.

ಈಗಾಗಲೇ 8 ಲಕ್ಷಕ್ಕೂ ಹೆಚ್ಚು ಆಮಂತ್ರಣ ಪತ್ರಿಕೆ ಸಿದ್ಧವಾಗಿದೆ. ಪ್ರತೀ ಹಳ್ಳಿಯ ಮುಖಂಡರ ಜೊತೆ ಚರ್ಚಿಸಿ ಎಷ್ಟು ಮನೆಗಳಿವೆ ಎಂದು ಮಾಹಿತಿ ಪಡೆದುಕೊಂಡಿದ್ದಾರಂತೆ. ರಾಮನಗರದಲ್ಲಿ ಸುಮಾರು 68 ಸಾವಿರ ಮನೆಗಳು ಹಾಗೂ ಚನ್ನಪಟ್ಟಣದಲ್ಲಿ ಸುಮಾರು 70 ಸಾವಿರ ಮನೆಗಳಿದೆ ಎಂಬ ಮಾಹಿತಿ ಇದೆ. ಅಷ್ಟೇ ಅಲ್ಲದೇ ಮದುವೆಗೆ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇದ್ದು, ಸುಮಾರು 1 ಸಾವಿರಕ್ಕೂ ಹೆಚ್ಚು ಅಡುಗೆ ಭಟ್ಟರನ್ನು ವ್ಯವಸ್ಥೆ ಮಾಡಲಾಗುತ್ತದೆಯಂತೆ!

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top